ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುಖ್ಯಮಂತ್ರಿ ಪದಕ ವಿಜೇತ ರವಿಕುಮಾರ್‌ಗೆ ಭಸ್ಮಂಗಿ ಕಾವಲ್ ಸರ್ಕಾರಿ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಅಭಿನಂದನೆ

Madhugiri News: ಭಯೋತ್ಪಾದಕ ನಿಗ್ರಹ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಪದಕ ಪಡೆದಿರುವ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಗಿದೆ. ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿ ಕ್ಲಸ್ಟರ್‌ನ ಭಸ್ಮಂಗಿ ಕಾವಲ್ ಬೆಟ್ಟದ ಶ್ರೀ ರುದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿದೆ.

ಮುಖ್ಯಮಂತ್ರಿ ಪದಕ ವಿಜೇತ ರವಿಕುಮಾರ್‌ಗೆ ಸನ್ಮಾನ

-

Profile
Siddalinga Swamy Jul 21, 2026 10:15 PM

ಮಧುಗಿರಿ, ಜು.21: ಮುಖ್ಯಮಂತ್ರಿ ಪದಕ ಪಡೆದಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ನಿಗ್ರಹ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವಿಕುಮಾರ್ ಅವರಿಗೆ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿ ಕ್ಲಸ್ಟರ್‌ನ ಭಸ್ಮಂಗಿ ಕಾವಲ್ ಬೆಟ್ಟದ ಶ್ರೀ ರುದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ‌ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಸುಮಾರು 20 ವರ್ಷಗಳ ಕಾಲ ಅಡುಗೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರಾಜಮ್ಮ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು ಮತ್ತು ಕರ್ನಾಟಕ ರಾಜ್ಯ ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೂ ಸನ್ಮಾನ ಮಾಡಲಾಗಿದೆ.

ಸಮಾಜದ ಒಳಿತಿಗಾಗಿ ಮಾಡಿದ ಸಾಧನೆ, ಸೇವೆಯೇ ಶಾಶ್ವತ: ನಿವೃತ್ತ ಮುಖ್ಯ ಶಿಕ್ಷಕ ಮಂಜುನಾಥ್

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಎಚ್.ಎಸ್., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ನರಸಿಂಹಮೂರ್ತಿ, ಇಸಿಓ ಕಾಪು ರಾಧಾಕೃಷ್ಣ, ಕ್ಲಸ್ಟರ್ ಸಿಆರ್‌ಪಿ ರಂಗನಾಥ್ ಹಾಗೂ ಕ್ಲಸ್ಟರ್‌ನ ಎಲ್ಲಾ ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.