ಓವರ್‌ಟೇಕ್ ಮಾಡಲು ಹೋಗಿ ಕಾರ್‌ಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Road Accident: ಓವರ್‌ಟೇಕ್ ಮಾಡಲು ಹೋಗಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಶನಿವಾರ ಪಾವಗಡ ಪಟ್ಟಣದ ಹೊರವಲಯದ ತುಮಕೂರು ರಸ್ತೆಯ ನಯಾರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾವಗಡ ಪಟ್ಟಣದ ಹೊರವಲಯದ ತುಮಕೂರು ರಸ್ತೆಯಲ್ಲಿ ನಡೆದ ಅಪಘಾತ -
ಪಾವಗಡ, ಅ. 24: ಓವರ್‌ಟೇಕ್ ಮಾಡಲು ಹೋಗಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಶನಿವಾರ (ಅಕ್ಟೋಬರ್ 24) ಸಂಜೆ ಸುಮಾರು 4 ಗಂಟೆಗೆ ಪಾವಗಡ ಪಟ್ಟಣದ ಹೊರವಲಯದ ತುಮಕೂರು ರಸ್ತೆಯ ನಯಾರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ (Road Accident). ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾದರು. ಅದೃಷ್ಟವಶಾತ್, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಈ ಸ್ಥಳವು ಅಪಘಾತ ವಲಯವಾಗಿ ಮಾರ್ಪಡುತ್ತಿದೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ವಾಹನ ಸವಾರರು ಅತಿವೇಗ ಹಾಗೂ ಅಜಾಗರೂಕ ಚಾಲನೆಗೆ ಕಡಿವಾಣ ಹಾಕಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಅಪಘಾತಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು 108, ಇತರ ವಾಹನಗಳ ಮೂಲಕ ಗಾಯಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರಾವನಿಸಿದರು. ನಂತರ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಧಾವಿಸಿ ಅಪಘಾತಗೊಂಡ ರಸ್ತೆಯಲ್ಲಿದ್ದ ವಾಹನಗಳು ತೆರವುಗಳಿಸಿ ಸುಗಮ ಸಂಚಾರಕ್ಕೆ ಟನುವು ಮಾಡಿಕೊಟ್ಟರು.
ಹುಕ್ಕೇರಿಯಲ್ಲಿ ದುರ್ಗಾ ಮಾತೆ ಮೆರವಣಿಗೆ ವೇಳೆ ಭೀಕರ ಅಪಘಾತ; ಮೂವರ ಸಾವು
ಚಿತ್ರದುರ್ಗದಲ್ಲಿ ಲಾರಿಗೆ ಬಸ್ ಡಿಕ್ಕಿ; ಇಬ್ಬರ ಸಾವು
ಚಿತ್ರದುರ್ಗ: ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಹಾಗೂ ಪ್ರಯಾಣಿಕ ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಗುರುವಾರ ನಡೆದಿತ್ತು. ಅಪಘಾತದಲ್ಲಿ ಬಸ್ ಚಾಲಕ ಬಾಪು ಪಾಟೀಲ್ (36), ಪ್ರಯಾಣಿಕ ಗಗನ್ (14) ಮೃತಪಟ್ಟಿದ್ದರು.
ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿದ್ದರು.