ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA S R Srinivas: ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಶಾಸಕ ಎಸ್.ಆರ್. ಶ್ರೀನಿವಾಸ್

ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಯುವಕರಾಗಿದ್ದು, ಉತ್ತಮ ಸಂಘಟನಾ ಸಾಮರ್ಥ್ಯ ಹೊಂದಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ತಮ್ಮ ತಮ್ಮ ತಾಲೂಕುಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ

-

Profile
Ashok Nayak Oct 14, 2026 5:02 PM

ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಒಂದು ವರ್ಷದ ಮುಂಚಿತವಾಗಿಯೇ ಘೋಷಣೆ ಮಾಡಿದ್ದು, ಈಗಾಗಲೇ ಸಂಪರ್ಕಿಸಲಾಗಿದೆ. ಈ ಬಾರಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್(MLA S R Srinivas) ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರ ಪರವಾಗಿ ಆಯೋಜಿಸಿದ್ದ ಮತಯಾಚನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುಬ್ಬಿ ತಾಲೂಕಿನಲ್ಲಿ ನಾಲ್ಕು ಸಾವಿರ ಕ್ಕೂ ಹೆಚ್ಚು ಪದವೀಧರ ಮತದಾರರಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಲಭಿಸುವ ನಿರೀಕ್ಷೆಯಿದೆ. ಶಿಕ್ಷಕರು, ವಕೀಲರು ಸೇರಿದಂತೆ ವಿವಿಧ ವೃತ್ತಿಗಳಲ್ಲಿರುವ ಪದವೀಧರರು ಆಡಳಿತ ಪಕ್ಷಕ್ಕೆ ಆದ್ಯತೆ ನೀಡಿದರೆ, ಮುಂದಿನ ದಿನಗಳಲ್ಲಿ ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: Gubbi News: ಚೇಳೂರು ಜಿಪಂ ಕ್ಷೇತ್ರಕ್ಕೆ ಮೈತ್ರಿ ಪಕ್ಷದ ಪ್ರಬಲ ಆಕಾಂಕ್ಷಿಯಾಗಿ ಗುಡ್ಡದಹಳ್ಳಿ ಬಸವರಾಜು

ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಯುವಕರಾಗಿದ್ದು, ಉತ್ತಮ ಸಂಘಟನಾ ಸಾಮರ್ಥ್ಯ ಹೊಂದಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ತಮ್ಮ ತಮ್ಮ ತಾಲೂಕುಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಯುವ ನಿಧಿ ಯೋಜನೆ ಸೇರಿದಂತೆ ಯುವಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಉದ್ಯೋ ಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಶಿಕ್ಷಕರಿಗೂ ಅನುಕೂಲವಾಗುವಂತೆ ಎನ್‌ಪಿಎಸ್ ಬದಲಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರುವ ವಿಚಾರವಾಗಿಯೂ ಸರ್ಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ನಾನು ತುಮಕೂರು ಜಿಲ್ಲೆಯವನಾಗಿರುವುದರಿಂದ ಕ್ಷೇತ್ರದ ಜನರಿಗೆ ಹತ್ತಿರವಾಗಿದ್ದು, ಸದಾ ನಿಮ್ಮೊಂದಿಗೆ ಇರುತ್ತೇನೆ. ಪದವೀಧರರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ, ತಾಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಮುಖಂಡರಾದ ಗುರು ರೇಣುಕಾ ರಾಧ್ಯ, ತಾತಯ್ಯ, ಸಲೀಮ್, ಶಂಕರ್ ನಂದ, ಬಿದರೆ ಯತೀಶ್, ಶೋಕಾತ್ ಆಲಿ, ದಾಸಪ್ಪ, ನಿವೃತ್ತ ಶಿಕ್ಷಕ ಶಿವಣ್ಣ, ಮಂಜುನಾಥ್, ಸಣ್ಣ ರಂಗಯ್ಯ, ನರಸಿಂಹಯ್ಯ, ಲಕ್ಷ್ಮೀನಾರಾಯಣ, ಕೊಡೆಯಾಲ ಮಾದೇವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.