Fire Accident: ಆಕಸ್ಮಿಕ ಬೆಂಕಿ ತಗುಲಿ ಕರು, ಹಸುಗಳ ಸಜೀವ ದಹನ
Fire Accident: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ಸೋಮವಾರ (ಮಾ. 10) ತಡರಾತ್ರಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಸು ಮತ್ತು ಕರು ಸಜೀವ ದಹನವಾಗಿದೆ. ಸ್ಥಳೀಯ ನಿವಾಸಿ ಕೊಂಡಪ್ಪ ಅವರಿಗೆ ಸೇರಿದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಜರುಗಿದೆ

ಬೆಂಕಿ ಆಕಸ್ಮಿಕದಿಂದ ಸುಟ್ಟುಹೋದ ಕೊಟ್ಟಿಗೆ.

ಕೊರಟಗೆರೆ: ಬಿಸಿಲಿನ ಝಳ ದಿನಕಳೆದಂತೆ ಹೆಚ್ಚಾಗುತ್ತಿದ್ದು, ಬೆಂಕಿ ಅವಘಡಗಳು ಅಲ್ಲಲ್ಲಿ ವರದಿಯಾಗುತ್ತಿವೆ (Fire Accident). ಸೋಮವಾರ (ಮಾ. 10) ತಡರಾತ್ರಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಸು ಮತ್ತು ಕರು ಸಜೀವ ದಹನವಾಗಿದೆ. ಸ್ಥಳೀಯ ನಿವಾಸಿ ಕೊಂಡಪ್ಪ ಅವರಿಗೆ ಸೇರಿದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಜರುಗಿದೆ (Tumkur News). ಗ್ರಾಮದ ಸರ್ವೆ ನಂಬರ್ 15/3ರಲ್ಲಿ ನಿರ್ಮಿಸಲಾದ ಜಾನುವಾರು ಕೊಟ್ಟಿಗೆಗೆ ತಡರಾತ್ರಿ ಆಕಸ್ಮಿಕ ಬೆಂಕಿ ತಗಲಿ 1 ಕರು, 4 ಹಸು ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ.
ಆಕಸ್ಮಿಕ ಬೆಂಕಿಗೆ 4 ಜಾನುವಾರುಗಳು ಸ್ಥಳದಲ್ಲಿ ಮೃತಪಟ್ಟಿದ್ದು, 1 ಹಸುವನ್ನು ರಕ್ಷಿಸಲಾಗಿತ್ತು. ಮಾಹಿತಿ ತಿಳಿದ ಕೂಡಲೇ ಪಶು ಇಲಾಖೆ ವೈದ್ಯರು ಸ್ಥಳಕ್ಕೆ ಬೇಟಿ ನೀಡಿ ರಕ್ಷಿಸಲಾದ ರಾಸುವಿಗೆ ಚಿಕಿತ್ಸೆ ನೀಡುದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಸು ಮಂಗಳವಾರ ಬೆಳಗ್ಗೆ ಮೃತಪಟ್ಟಿದೆ. ಆ ಮೂಲಕ ಬೆಂಕಿ ಆಕಸ್ಮಿಕ ಘಟನೆಗೆ ಒಟ್ಟು 1 ಕರು, 4 ಹಸು ಬೆಂಕಿಗೆ ಆಹುತಿಯಾದಂತಾಗಿದೆ.
ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ. ನಾಗಭೂಷಣ್ ಭೇಟಿ ನೀಡಿ, ರೈತನಿಗೆ ಸಾಂತ್ವನ ತಿಳಿಸಿದ್ದಾರೆ. ಜತೆಗೆ ಇಲಾಖೆಯಿಂದ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Shops caught fire: ಆಕಸ್ಮಿಕ ಬೆಂಕಿ: ಅಪಾರ ನಷ್ಟ
ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ
ಪಾವಗಡ: ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹಸುವೊಂದು ಸಜೀವ ದಹನವಾಗಿರುವ ಘಟನೆ ಪಾವಗಡ ತಾಲೂಕಿನ ಕಾರನಾಗನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಪಾವಗಡ ತಾಲೂಕಿನ ಕಾರನಾಗನಹಟ್ಟಿ ಗ್ರಾಮದ ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಆವರಿಸಿಕೊಂಡಿತ್ತು. ಬಳಿಕ ಹುಲ್ಲಿನ ಬಣವೆ ಸಮೀಪದಲ್ಲಿ ಕಟ್ಟಿ ಹಾಕಿದ್ದ ಐದು ಹಸುಗಳ ಪೈಕಿ ಬೆಂಕಿಯ ತೀವ್ರತೆಗೆ ಒಂದು ಸಜೀವ ದಹನವಾಗಿತ್ತು. ಹಸುಗಳನ್ನು ರಕ್ಷಿಸಲು ಮುಂದಾದ ರೈತ ಬಡನಾಗಪ್ಪ ಅವರಿಗೆ ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆಕಸ್ಮಿಕ ಅಗ್ನಿ ಅವಘಡದಿಂದ ರಾಸುಗಳ ಮೇವಿಗಾಗಿ ಸಂಗ್ರಹಿಸಿದ್ದ ಎರಡು ದೊಡ್ಡ ಹುಲ್ಲಿನ ಬಣವೆಗಳು ಸುಟ್ಟು ಹೋಗಿದ್ದು, ಪಕ್ಕದ ತೋಟದ ಮನೆಯಲ್ಲಿ ಶೇಖರಿಸಿದ್ದ ಶೇಂಗಾ, ಭತ್ತ ಹಾಗೂ ಇತರ ದವಸ ಧಾನ್ಯಗಳು ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿತ್ತು.