ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Cyber Crime: ಕೂಲಿ ಮಾಡುವವರ ಹಣಕ್ಕೆ ಕನ್ನ ಹಾಕಿದ ಕಿರಾತಕರು; ಹಣ ಡಬಲ್ ಮಾಡಿಕೊಡೋದಾಗಿ 10 ಲಕ್ಷ ದೋಖಾ

Cyber Crime: ತುಮಕೂರು ನಗರದಲ್ಲಿ ಪ್ರಕರಣ ನಡೆದಿದೆ. COSTA ಎಂಬ ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ಹೇಳಿ ಯುವಕರಿಗೆ ಮೋಸಲಾಗಿದೆ.

ಕೂಲಿ ಮಾಡುವವರ ಹಣಕ್ಕೆ ಕನ್ನ ಹಾಕಿದ ಕಿರಾತಕರು; ಹಣ ಡಬಲ್ ಮಾಡಿಕೊಡೋದಾಗಿ 10 ಲಕ್ಷ ದೋಖಾ

Profile Prabhakara R Jan 26, 2025 8:56 PM

ತುಮಕೂರು: ಹೊಟ್ಟೆಪಾಡಿಗಾಗಿ ಕೂಲಿ ಅರಸಿ ಬಂದು ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕರ ಖಾತೆಗೆ ಕನ್ನ ಹಾಕಿರುವ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಯುವಕರ ಖಾತೆಯಿಂದ ಖದೀಮರು 10 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ.

ಜಯನಗರದಲ್ಲಿ ವಾಸವಿರುವ ಯಾದಗಿರಿ ಜಿಲ್ಲೆಯ ಯುವಕರು ಸೈಬರ್‌ ವಂಚಕರ ಬಲೆಗೆ ಬಿದ್ದು ಸಂಕಷ್ಟ ಎದುರಿಸುತ್ತಿದ್ದಾರೆ. ಅಂಬರೀಶ್‌, ಶರಣಗೌಡ, ಆನಂದ, ಶಾಂತಪ್ಪ ಇತರರು ಮೋಸ ಹೋದವರು.

ಸಂಗಮೇಶ್‌ ಎಂಬಾತ COSTA ಎಂಬ ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ತಿಳಿಸಿದ್ದ. ಅದರಂತೆ ಹಲವು ಮಂದಿ ಹಣ ಹಾಕಿ 10 ಲಕ್ಷ ಕಳೆದುಕೊಂಡಿದ್ದೇವೆ ಎಂದು ಯುವಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೊದಲ ಬಾರಿಗೆ 9,800 ಜಮಾ ಮಾಡಿದ್ದು, ನನ್ನ ಖಾತೆಗೆ 11 ಸಾವಿರ ವಾಪಸ್‌ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು 5.18 ಲಕ್ಷ ಹಣವನ್ನು COSTA ಆ್ಯಪ್‌ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್‌, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ ಹಣ ವರ್ಗಾಯಿಸಿದ್ದಾರೆ. ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಸುರಪುರದ ತಿಪ್ಪಣ್ಣ ನಗರದ ಸೈಬರ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Physical abuse: 15 ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಲು ಪ್ರಿಯಕರನಿಗೆ ಸಹಕರಿಸಿದ ತಾಯಿ!

ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

ಚಾಮರಾಜನಗರ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅಚಾನಕ್ಕಾಗಿ ಕಿಟಕಿಯಿಂದ ತಲೆ ಹೊರಹಾಕಿ ದಾರುಣವಾಗಿ ಪ್ರಾಣ ಕಳೆದುಕೊಂಡಿರುವುದು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಸ್‌ನಿಂದ ಮಹಿಳೆ ತಲೆ ಹೊರ ಹಾಕಿದಾಗ, ಗೂಡ್ಸ್ ಲಾರಿ ಡಿಕ್ಕಿಯಾಗಿ ರುಂಡ ಬೇರ್ಪಟ್ಟಿದೆ.

ಹಾಲಹಳ್ಳಿ ನಿವಾಸಿ ಶಿವಲಿಂಗಮ್ಮ (58) ಮೃತರು ಎಂದು ತಿಳಿದುಬಂದಿದೆ. ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಏಕಾಏಕಿ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಡಿಕ್ಕಿ ಹೊಡೆದ ಪರಿಣಾಮ, ದೇಹದಿಂದ ರುಂಡ ತುಂಡಾಗಿ ಮಹಿಳೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ತಾಲೂಕಿನ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ. ‌

ಅಪಘಾತ ನಡೆದ ಬಳಿಕ ಚಾಲಕ, ಲಾರಿ ನಿಲ್ಲಿಸದೇ ಪರಾರಿಯಾಗಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋ ಬಿಪಿಯಿಂದ 7ನೇ ತರಗತಿ ವಿದ್ಯಾರ್ಥಿ ಸಾವು

ನಂಜನಗೂಡು: ಹೃದಯ ವೈಫಲ್ಯದಿಂದ (Heart Failure) ಸಣ್ಣ ಮಕ್ಕಳು ಸಾಯುತ್ತಿರುವ ಸುದ್ದಿಗಳ ನಡುವೆಯೇ, ಲೋ ಬಿಪಿಯಿಂದಾಗಿ (Low BP) ಬಾಲಕನೊಬ್ಬ ಮೃತಪಟ್ಟ (Student Death) ಘೋರ ಘಟನೆ ನಂಜನಗೂಡಿನಿಂದ (Nanjanagud) ವರದಿಯಾಗಿದೆ.

ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ (13) ಲೋ ಬಿಪಿಯಿಂದ ಮೃತಪಟ್ಟ ಬಾಲಕ.

ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಮಹಾಂತೇಶನನ್ನು ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.