ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ: ಎಂಎಲ್‌ಸಿ ಆರ್.ರಾಜೇಂದ್ರ ಮಾಹಿತಿ

Madhugiri News: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದ್ದಾರೆ.

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

ಮಧುಗಿರಿಯಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಎಂಎಲ್‌ಸಿ ಆರ್. ರಾಜೇಂದ್ರ ರಾಜಣ್ಣ. -

Profile
Siddalinga Swamy Aug 8, 2026 7:22 PM

ಮಧುಗಿರಿ, ಆ.08: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದರು.

ಮಧುಗಿರಿ ಪಟ್ಟಣದಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಅಂದು (ಆ.10) ಅಧಿಕಾರಿಗಳ ಜೊತೆ ಡಾ.ಜಿ.ಪರಮೇಶ್ವರ್ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಇನ್ನು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಕೆ.ಆರ್.ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಪಿ. ಎಂ.ಶ್ರೀ.ಕರ್ನಾಟಕ ಪಬ್ಲಿಕ್ ಶಾಲೆ) ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆಗೆ ರಾಜೇಂದ್ರ ಅವರು ಸ್ಥಳ ಪರಿಶೀಲಿಸಿದರು.

Madhugiri

ನಂತರ ಪಟ್ಟಣದ ಪಾವಗಡ ವೃತ್ತದಿಂದ ಶಿರಾ ಗೇಟ್‌ವರೆಗೆ ರಸ್ತೆ ಅಗಲೀಕರಣ ಮತ್ತು ರಸ್ತೆ ವಿಭಜಕ (ಡಿವೈಡರ್) ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕಾಮಗಾರಿಯು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸುವಂತೆ ಸೂಚಿಸಿ ಹಾಗೂ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಬಳಿಕ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಅಧಿಕಾರಿಗಳ ಜೊತೆ ಚರ್ಚಿಸಿ ಕೆಲವು ಸಲಹೆಗಳು ನೀಡಿದರು. ಇದೇ ವೇಳೆ ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣರವರ ಕನಸಿನ ಮಹಾತ್ವಾಕಾಂಕ್ಷಿ ಯೋಜನೆಯಾದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ಮಧ್ಯಾಹ್ನದ ಬಿಸಿಯೂಟಕ್ಕೆ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿ, ಕಾಲೇಜು ಸಿಬ್ಬಂದಿಗೆ ಆಹಾರದ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ಗಮನ ಹರಿಸಲು ಸೂಚಿಸಿದರು.

ಈ ವೇಳೆ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿವೈಎಸ್ಪಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ, ತಾಪಂ ಇಒ ಬಿ.ಕೆ.ಉತ್ತಮ, ಎಡಿ ಧನಂಜಯ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಪುರಸಭಾ ಮಾಜಿ ಅಧ್ಯಕ್ಷರುಗಳಾದ ಎಂ.ಕೆ.ನಂಜುಂಡರಾಜು, ಲಾಲಾಪೇಟೆ ಮಂಜುನಾಥ ಸೇರಿದಂತೆ ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ವರ್ಗದವರು ಇದ್ದರು.

ಯಾರೂ ಮತದಾನ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳಿ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)‌ ಅವಧಿಯನ್ನು ವಿಸ್ತರಿಸಿದ್ದು, ಮುಖಂಡರು ತಮ್ಮ ಗ್ರಾಮಗಳಲ್ಲಿ ಯಾರೂ ಮತದಾರರ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವಂತೆ ರಾಜೇಂದ್ರ ಅವರು ಸಲಹೆ ನೀಡಿದರು.