ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತುಮಕೂರು ದಸರಾ: ಪೌರಕಾರ್ಮಿಕರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್‌

Dr G Parameshwara: ಹಬ್ಬದ ಬೆಳಕು ಎಲ್ಲರ ಬದುಕಿನಲ್ಲೂ ಸಂತೋಷವನ್ನು ತುಂಬುವ ಈ ಸಂದರ್ಭದಲ್ಲಿ, ಆ ಬೆಳಕಿನ ಹಿಂದೆ ಮೌನವಾಗಿ ಶ್ರಮಿಸುವ ಕೈಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪೌರಕಾರ್ಮಿಕರ ಶ್ರಮಕ್ಕೆ ಗೌರವ, ಅವರ ಬದುಕಿಗೆ ಘನತೆ ಮತ್ತು ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವುದೇ ನಿಜವಾದ ಮಾನವೀಯತೆಯಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ತುಮಕೂರು, ಅ.20: ತುಮಕೂರು ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗುವ ಮುನ್ನ, ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಅಮರಶಿಲ್ಪಿ ಜಕಣಾಚಾರಿ ಮಹಾವೇದಿಕೆಯ ಬಳಿ ಡಿಸಿಎಂ ಡಾ.ಜಿ. ಪರಮೇಶ್ವರ (Dr G Parameshwara) ಅವರು, ನಗರದ ಪೌರಕಾರ್ಮಿಕರನ್ನು ಖುದ್ದಾಗಿ ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಅವರನ್ನು ವೇದಿಕೆಗೆ ಆಹ್ವಾನಿಸಿ, ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

ನಾವೆಲ್ಲರೂ ಹಬ್ಬದ ಸಂಭ್ರಮದಲ್ಲಿ ಮಗ್ನರಾಗಿರುವಾಗ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಿತ್ಯವೂ ಸ್ವಚ್ಛವಾಗಿಡಲು ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ. ಅವರ ಈ ಶ್ರಮದ ಹಿಂದೆ ಅನೇಕ ಬದುಕಿನ ಕಥೆಗಳು, ಸವಾಲುಗಳು ಹಾಗೂ ನೋವುಗಳಿದ್ದರೂ, ತಮ್ಮ ಕರ್ತವ್ಯವನ್ನು ನಿರಂತರವಾಗಿ ನಿಭಾಯಿಸುವ ಜವಾಬ್ದಾರಿಯನ್ನು ಅವರು ಹೊತ್ತಿದ್ದಾರೆ. ನಗರದ ಸ್ವಚ್ಛತೆ ಎನ್ನುವುದು ಕೇವಲ ಅವರ ಕರ್ತವ್ಯವಷ್ಟೇ ಅಲ್ಲ, ಬದಲಿಗೆ ಅದು ನಮ್ಮೆಲ್ಲರ ಆರೋಗ್ಯ ಮತ್ತು ನೆಮ್ಮದಿಗೆ ಅವರು ನೀಡುತ್ತಿರುವ ಅಮೂಲ್ಯ ಕೊಡುಗೆಯಾಗಿದೆ ಎಂದು ಅವರು ಶ್ಲಾಘಿಸಿದರು.‌

ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮೂರನೇ ಮನವಿ ಪತ್ರ ಸಲ್ಲಿಸಲು ಸಿದ್ಧತೆ: ಡಾ.ಜಿ. ಪರಮೇಶ್ವರ್‌

ಹಬ್ಬದ ಬೆಳಕು ಎಲ್ಲರ ಬದುಕಿನಲ್ಲೂ ಸಂತೋಷವನ್ನು ತುಂಬುವ ಈ ಸಂದರ್ಭದಲ್ಲಿ, ಆ ಬೆಳಕಿನ ಹಿಂದೆ ಮೌನವಾಗಿ ಶ್ರಮಿಸುವ ಕೈಗಳನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪೌರಕಾರ್ಮಿಕರ ಶ್ರಮಕ್ಕೆ ಗೌರವ, ಅವರ ಬದುಕಿಗೆ ಘನತೆ ಮತ್ತು ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವುದೇ ನಿಜವಾದ ಮಾನವೀಯತೆಯಾಗಿದೆ. ಪೌರಕಾರ್ಮಿಕರ ಕಠಿಣ ಶ್ರಮಕ್ಕೆ ನಮ್ಮ ಗೌರವ ಸದಾ ಇರಲಿ ಹಾಗೂ ಅವರ ಬದುಕಿನಲ್ಲೂ ಸಂತೋಷದ ಬೆಳಕು ಅರಳಲಿ ಎಂದು ಆಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದರು.