ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಬ್ಬದ ದಿನವೂ ನೀರಿಲ್ಲ; ಖಾಲಿ ಕೊಡ ಹಿಡಿದು ಬ್ಯಾಡನೂರು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Pavagada News: ಕುಡಿಯುವ ನೀರಿನ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ, ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ, ಖಾಲಿ ಕೊಡಗಳೊಂದಿಗೆ ಬ್ಯಾಡನೂರು ಪಂಚಾಯಿತಿ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾವಗಡ, ಅ.19: ಹಬ್ಬದ ದಿನವೂ ಕುಡಿಯುವ ನೀರು (Drinking Water) ಪೂರೈಕೆಯಾಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಪಾವಗಡ ತಾಲೂಕಿನ (Pavagada News) ಬ್ಯಾಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿಯೂ ಸಮರ್ಪಕವಾಗಿ ನೀರು ಪೂರೈಸದಿರುವುದರಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಮನೆಗಳಲ್ಲಿ ಪೂಜಾ ಕಾರ್ಯಗಳು ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಲು ನೀರು ಅತ್ಯಗತ್ಯವಾಗಿದೆ. ಆದರೆ, ಕುಡಿಯುವ ನೀರೇ ಸಿಗದಿದ್ದರೆ ಹಬ್ಬವನ್ನು ಹೇಗೆ ಆಚರಿಸಬೇಕು ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ, ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಖಾಲಿ ಕೊಡಗಳೊಂದಿಗೆ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

Gruha Jyothi Scheme: ಗೃಹ ಜ್ಯೋತಿ ಸಮೀಕ್ಷೆ: ಬೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ದಾಖಲೆ ಸಲ್ಲಿಕೆಗೆ ಅವಕಾಶ

ಈ ಸಂದರ್ಭದಲ್ಲಿ ಬ್ಯಾಡನೂರು ಗ್ರಾಮಸ್ಥರಾದ ಪ್ರೇಮ, ರಾಜಗೋಪಾಲ್, ಶಂಕರ್, ರವಿ, ಕೆತನ್, ಮಾಬುದಮ್ಮ, ನಾಗರಾಜು, ಸಾವಿತ್ರಮ್ಮ, ರಮೇಶ್, ಮಂಜುಳಾ, ನಾಗವೇಣಿ, ನರೇಂದ್ರ, ರಂಗಪ್ಪ, ಶಾಂತಂವೀರಪ್ಪ, ಗೌರೀಶ್, ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.