ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ; ತಾಲೂಕು ಕಚೇರಿಯಲ್ಲೇ ವಿಷ ಕುಡಿದ ವಿಶೇಷಚೇತನ ರೈತ
ತುರುವೇಕೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ವಿಶೇಷಚೇತನ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲಾತಿ ಸೃಷ್ಟಿಸಿ ತನಗೆ ವಂಚಿಸಿದ್ದಾರೆ ಎಂದು ರೈತ ಅರೋಪಿಸಿದ್ದಾರೆ.
ತುಮಕೂರು: ನಕಲಿ ದಾಖಲೆ ಸೃಷ್ಟಿಸಿ ಪಿತ್ರಾರ್ಜಿತ ಆಸ್ತಿ ಕಬಳಿಸಿ ಬೇರೆಯವರ ಹೆಸರಿಗೆ ನೋಂದಣಿ ಮಾಡಲಾಗಿದೆ ಎಂದು ಮನನೊಂದ ವಿಶೇಷ ಚೇತನ ರೈತರೊಬ್ಬರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.
ತುರುವೇಕೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ವಿಶೇಷಚೇತನ ಜಯಕುಮಾರ್ (50) ಆತ್ಮಹತ್ಯೆಗೆ ಯತ್ನಿಸಿದ ರೈತ. ಜಯಕುಮಾರ್ ಅಮ್ಮಸಂದ್ರದಲ್ಲಿ ಸಣ್ಣ ಟೀ ಅಂಗಡಿಯನ್ನು ಇಟ್ಟುಕೊಂಡಿದ್ದಾರೆ. ತಮ್ಮ ತಂದೆಯ ಹೆಸರಿನಲ್ಲಿದ್ದ ಸುಮಾರು 1.02 ಗುಂಟೆ ಮತ್ತು 11 ಗುಂಟೆ ಜಮೀನು ಇದೆ.
ಪಿತ್ರಾರ್ಜಿತ ಜಮೀನನ್ನು ಬೇರೆಯವರ ಹೆಸರಿಗೆ ಅಕ್ರಮವಾಗಿ ನೋಂದಣಿ ಮಾಡಿದ ಕಾರಣಕ್ಕೆ ರೈತ ತುರುವೇಕೆರೆಯ ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆಸ್ವಸ್ಥಗೊಂಡ ಜಯಕುಮಾರ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲಾತಿ ಸೃಷ್ಟಿಸಿ ತನಗೆ ವಂಚಿಸಿದ್ದಾರೆ. ಜಯಕುಮಾರ್ ಬಿನ್ ಲಕ್ಕಪ್ಪ ಹೆಸರಿನಲ್ಲಿರುವ ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ಕೃಷ್ಣಪ್ಪ ಮತ್ತು ಗಂಗಮ್ಮ ಎಂಬುವವರ ಹೆಸರಿಗೆ ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಗಳು ಅಕ್ರಮವೆಸಗಿದ್ದಾರೆ ಎಂದು ರೈತ ಅರೋಪಿಸಿದ್ದು, ಕಳೆದ ತಿಂಗಳ ತನಕವೂ ತಂದೆ ಹೆಸರಿನಲ್ಲಿನ ದಾಖಲೆ ಈಗ ಕೃಷ್ಣಪ್ಪ ಮತ್ತು ಗಂಗಮ್ಮನ ಹೆಸರಿನಲ್ಲಿದೆ ಎಂದು ರೈತ ದೂರಿದ್ದಾರೆ.
ಈ ಸುದ್ದಿಯನ್ನೂ ಓದಿ | Physical Assault: ಆಟೋ ಚಾಲಕರಿಂದ ವಲಸೆ ಕಾರ್ಮಿಕ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ!
ತಂತ್ರಜ್ಞಾನವನ್ನು ಸೈಬರ್ ವಂಚಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು
ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಆಗುತ್ತಿವೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಬುಧವಾರ ಹಮ್ಮಿಕೊಂಡಿದ್ದ ‘ಸೈಬರ್ ಭದ್ರತೆ ಮತ್ತು ಎಥಿಕಲ್ ಹ್ಯಾಕಿಂಗ್’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ತಂತ್ರಜ್ಞಾನಗಳನ್ನು ಬಳಸಲು ಇಂದು ಉತ್ತಮ ವೇದಿಕೆಗಳಿವೆ. ಆದರೆ ಅವುಗಳನ್ನು ಕೆಲವು ಸೈಬರ್ ವಂಚಕ ಗುಂಪುಗಳು ದುರುಪಯೋಗಪಡಿಸಿಕೊಳ್ಳುತ್ತಿವೆ. ಎಷ್ಟೋ ವಿದ್ಯಾವಂತರು ಕೂಡ ಇವರಿಂದ ಶೋಷಣೆಗೊಳಗಾಗಿದ್ದಾರೆ. ವಿದ್ಯಾವಂತರು ಇಂತಹ ಸಮಸ್ಯೆಗಳ ಬಗ್ಗೆ ಸಾಧ್ಯವಾದಷ್ಟು ತಿಳಿವಳಿಕೆ ನೀಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರ್. ವಿ. ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ. ಮೋಹನ ಮಾತನಾಡಿ, ಸೈಬರ್ ಕ್ರೆöÊಂ ಈಗ ಒಂದು ಆಯುಧವಾಗಿದೆ. ಕೂತಲ್ಲಿಯೇ ಎಲ್ಲವನ್ನು ನಿಯಂತ್ರಿಸುವ ಶಕ್ತಿ ಹೊಂದಿದೆ ಎಂದರು.
ಕೋವಿಡ್ ಸಮಯದಲ್ಲಿ ಹೆಚ್ಚು ಪ್ರಾಮುಖ್ಯತೆ ವಹಿಸಿದ ಸಾಮಾಜಿಕ ಮಾಧ್ಯಮವನ್ನು ನಂತರದ ದಿನಗಳಲ್ಲಿ ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಎಷ್ಟೋ ಮಂದಿಗೆ ತಿಳಿದಿರುವುದಿಲ್ಲ. ತಿಳಿದವರು ಸಾಮಾಜಿಕ ಜಾಗೃತಿಗೆ ಶ್ರಮಿಸಬೇಕು ಎಂದರು.
ಸಂಘಟನಾ ಕಾರ್ಯದರ್ಶಿ ಡಾ. ಕುಸುಮಕುಮಾರಿ ಬಿ. ಎಂ., ಚಿನ್ಮಯ್ ಜೆ., ಸುಜಯ್ ಎ.ಕೆ. ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ವಿವರ: ತುಮಕೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು ಹಮ್ಮಿಕೊಂಡಿದ್ದ ‘ಸೈಬರ್ ಭದ್ರತೆ ಮತ್ತು ಎಥಿಕಲ್ ಹ್ಯಾಕಿಂಗ್’ ಕುರಿತ ಕಾರ್ಯಾಗಾರದಲ್ಲಿ ಆರ್. ವಿ. ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ. ಮೋಹನ ಮಾತನಾಡಿದರು.