ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Student Arrest: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

Student Arrest: ಚಿಕ್ಕನಾಯಕನಹಳ್ಳಿ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಸುತ್ತಮುತ್ತಲಿನ ಮನೆಗಳಲ್ಲಿ ಮಹಿಳೆಯರ ಒಳ ಉಡುಪು ಕದಿಯುವ ಕೃತ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

Profile Prabhakara R Mar 9, 2025 4:22 PM

ತುಮಕೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು (Student Arrest) ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಮೂಲದ ಶರತ್ (25) ಬಂಧಿತ ವಿದ್ಯಾರ್ಥಿ. ಮಹಿಳೆಯರ ಒಳ ಉಡುಪುಗಳನ್ನು ಕದಿಯುವುದನ್ನು ಯುವಕ ಕಾಯಕ ಮಾಡಿಕೊಂಡಿದ್ದ. ಈತ ಸುತ್ತಮುತ್ತಲಿನ ಮನೆಗಳಲ್ಲಿ ಮಹಿಳೆಯರ ಒಳ ಉಡುಪು ಕದಿಯುವ ಕೃತ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಯುವ ಬಿಇ ವ್ಯಾಸಂಗ ಮಾಡುತ್ತಾ ಬಾಡಿಗೆ ರೂಮಿನಲ್ಲಿ ವಾಸವಿದ್ದ. ಓದಿನ ಜತೆಗೆ ನೀಲಿಚಿತ್ರ ನೋಡುವುದನ್ನು ಒಂದು ಚಟವಾಗಿ ಬೆಳೆಸಿಕೊಂಡಿದ್ದ ಎಂಬುವ ವಿಷಯವನ್ನು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಅಶ್ಲೀಲ ಚಿತ್ರ ನೋಡಿದ ಅಮಲಿನಲ್ಲಿ ಮನೆಗಳ ಮೇಲೆ ಒಣಗಿ ಹಾಕುತ್ತಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಅದರಿಂದ ಕಾಮಸುಖ ಅನುಭವಿಸುತ್ತಿದ್ದನು ಎಂಬುದು ಬೆಳಕಿಗೆ ಬಂದಿದೆ.

ತುಮಕೂರು ನಗರದ ಅಶೋಕನಗರ, ಎಸ್.ಎಸ್. ಪುರಂ, ಎಸ್‌ಐಟಿ ಬ್ಯಾಕ್ ಗೇಟ್ ಸೇರಿದಂತೆ ಹಲವು ಕಡೆಗಳಲ್ಲಿ ಶರತ್ ಮಹಿಳೆಯರ ಒಳ ಉಡುಪುಗಳನ್ನು ಕದಿಯುವ ಚಾಳಿ ರೂಢಿಸಿಕೊಂಡಿದ್ದ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | UP Horror: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಹತ್ಯೆ; ಹೆದ್ದಾರಿಯಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ದುಷ್ಕರ್ಮಿಗಳು

ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ಹಾಲು ತರಲು ಹೋಗಿದ್ದ ವ್ಯಕ್ತಿ ಬಲಿ

ತುಮಕೂರು: ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ (Bike wheeling) ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ತುಮಕೂರು ನಗರದ ಟೂಡಾ ಕಚೇರಿ ಬಳಿ ಶನಿವಾರ ಬೆಳಗ್ಗೆ ಜರುಗಿದೆ. ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ಟಿ. ತಿಪ್ಪೇಸ್ವಾಮಿ ಮೃತ ವ್ಯಕ್ತಿ. ಶನಿವಾರ ಬೆಳಗ್ಗೆ ಮನೆಗೆ ಹಾಲು ತರಲೆಂದು ಬಂದಿದ್ದ ವೇಳೆ ವ್ಹೀಲಿಂಗ್ ಮಾಡಿಕೊಂಡು ಬಂದ ಪುಂಡರ ಬೈಕ್, ತಿಪ್ಪೇಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ತಿಪ್ಪೇಸ್ವಾಮಿ ಸಾವನ್ನಪ್ಪಿದ್ದಾರೆ. ಈ ಕುರಿತು ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಒಬ್ಬ ಮಹಿಳೆ ಹಾಗೂ ಪುರುಷ ಸಜೀವದಹನವಾಗಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದ ಧನಂಜಯ ರೆಡ್ಡಿ(31ವ), ಕಲಾವತಿ(35ವ) ಮೃತರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೀಕರ ಅಪಘಾತದಲ್ಲಿ ಕಾರು ಬೆಂಕಿಯಿಂದ ಹೊತ್ತಿ ಉರಿದಿದ್ದರೆ, ಬಸ್​​ ಪಲ್ಟಿಯಾಗಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮದನಪಲ್ಲಿ ನಿವಾಸಿಗಳಾದ ಇಬ್ಬರು ಸುಟ್ಟು ಕರಕಲಾಗಿದ್ದರೆ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್​ನಲ್ಲಿ ಪ್ರಯಾಣಿಕರೆಲ್ಲರೂ ಬಚಾವಾಗಿದ್ದಾರೆ.