ಮಧುಗಿರಿ, ನ.23: ಜನಮುಖಿಯಾಗಿ ಕೆಲಸ ಮಾಡಿದ ಪರಿಣಾಮ ಕೊಂಡವಾಡಿ ಚಂದ್ರಶೇಖರ್ ಸೇರಿದಂತೆ ಮೂವರಿಗೆ ಸಹಕಾರ ರತ್ನ ಪ್ರಶಸ್ತಿ ದೊರೆತಿದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ಹೇಳಿದರು. ಪಟ್ಟಣದ (Madhugiri News) ಕುಂಚಿಟಿಗರ ಸಮುದಾಯದ ಸಭಾಂಗಣದಲ್ಲಿ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ತುಮುಲ್ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಬರಗಾಲ ತಾಂಡವವಾಡುತ್ತಿದ್ದು ರೈತರ ಸಂಕಷ್ಟಗಳಿಗೆ ಸರ್ಕಾರ ಸ್ಪಂದನೆ ಮಾಡಬೇಕು ಎಂದು ಶ್ರೀಗಳು ತಿಳಿಸಿದರು.
ನೀರಾವರಿ ಯೋಜನೆ ಜಾರಿ ಆಗಲಿ
ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಶಾಶ್ವತವಾದ ಕೆಲಸ - ಕಾರ್ಯಗಳನ್ನು ಮಾಡುವ ಮೂಲಕ ಸಾಕ್ಷಿ ಗುಡ್ಡೆಗಳನ್ನು ಜನತೆಗೆ ತೋರಿಸಬೇಕು ಎಂದು ತಿಳಿಸಿದರು. ರೈತರಿಗೆ ವ್ಯವಸಾಯ, ಜನ - ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದಕ್ಕೆ ಶಾಶ್ವತವಾದ ನೀರಾವರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ತಿಳಿಸಿದರು. ನಾನು ಸಹಕಾರ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಹೇಳಿದರು.
ತುಮುಲ್ ನಿರ್ದೇಶಕರಾದ ಭಾರತಿ ಶ್ರೀನಿವಾಸ್ ಮಾತನಾಡಿ, ಕೊಂಡವಾಡಿ ಚಂದ್ರಶೇಖರ್ ಅವರು ತುಮುಲ್ ಅಧ್ಯಕ್ಷರಾಗಿದ್ದಾಗ ಉತ್ತಮವಾದ ಕೆಲಸ - ಕಾರ್ಯಗಳನ್ನು ಮಾಡಿದ್ದಾರೆ ಎಂದು ಶ್ಲಾಘಿಸಿದರು.
ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಜನಮುಖಿ ಸಂಸ್ಥೆಯ ಎಲ್.ಸಿ. ನಾಗರಾಜು ಮಾತನಾಡಿ, 101 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿರುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು ತಿಳಿಸಿದರು.
ಪುರಸಭೆ ಮಾಜಿ ಸದಸ್ಯ ಎಂ.ಆರ್.ಜಗನ್ನಾಥ ಮಾತನಾಡಿ, ಸಹಕಾರ ರತ್ನ ಪ್ರಶಸ್ತಿಯನ್ನು ಪಡೆದಿರುವ ಕೊಂಡವಾಡಿ ಚಂದ್ರಶೇಖರ್ ಅವರ ಶ್ರಮ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಜಿ.ಪಂ. ಮಾಜಿ ಸದಸ್ಯ ಎಸ್.ಡಿ. ಕೃಷ್ಣಪ್ಪ ಮಾತನಾಡಿದರು. ಈ ವೇಳೆ ತುಮುಲ್ ನಿರ್ದೇಶಕರಾದ ಪ್ರಕಾಶ್, ಶಿವಪ್ರಕಾಶ್, ಚೆನ್ನಮಲ್ಲಯ್ಯ, ಪುರಸಭೆ ಮಾಜಿ ಸದಸ್ಯರಾದ ಎಂ.ಎಸ್. ಚಂದ್ರಶೇಖರ್, ಮುಖಂಡರಾದ ಸುಮುಖ್ ಚಂದ್ರಶೇಖರ್, ಬಸವರಾಜು, ಆರ್.ಎ. ನಾರಾಯಣ್, ದೊಡ್ಡಯ್ಯ, ಮರುಳಯ್ಯ, ಹರೀಶ್, ನರಸಿಂಹರಾಜು, ಕಾಂತಣ್ಣ, ನಾಗಭೂಷಣ್, ಚಿಕ್ಕೋಬಳರೆಡ್ಡಿ, ಪ್ರಭು, ವೀರೇಂದ್ರ, ಧರ್ಮವೀರ್ ಇತರರು ಇದ್ದರು.