ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gubbi News: ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ಕರೆ

ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯ ಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ

ಗುಬ್ಬಿ: ಸ್ವಾತಂತ್ರ್ಯೋತ್ಸವದ ಮುನ್ನ ದಿನ ಪ್ರತಿ ಮನೆ ಮನೆಗಳ ಮೇಲೆ ಭಾವೈಕ್ಯತೆ ಸಾರುವ ನಮ್ಮ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಕೈ ಜೋಡಿಸಬೇಕು ಎಂದು ಗುಬ್ಬಿ ಬಿಜೆಪಿ ಪಕ್ಷದ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಕರೆ ನೀಡಿ ದರು.

ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯ ಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Tumkur (Gubbi) News: ಬಿದರೆ ಗ್ರಾಪಂ ಅಧ್ಯಕ್ಷರಾಗಿ ರೇಣುಕಮ್ಮ ರಾಮಕೃಷ್ಣಯ್ಯ ಅವಿರೋಧ ಆಯ್ಕೆ

ಬಿಜೆಪಿ ಮುಖಂಡ ಎಚ್.ಟಿ.ಭೈರಪ್ಪ ಮಾತನಾಡಿ ರಾಷ್ಟ್ರಧ್ವಜವನ್ನು ಮೊದಲಿಗೆ ಸರ್ಕಾರಿ ಶಾಲಾ ಮತ್ತು ಕಚೇರಿಗಳ ಮೇಲೆ ಹಾರಿಸಲಾಗುತ್ತಿತ್ತು. ನಂತರದ ದಿನಗಳಲ್ಲಿ ಸಂವಿಧಾನದ ಆಶಯದಂತೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಮನೆ ಮನೆಗಳ ಮೇಲೆ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಹಿನ್ನೆಲೆ ಇಡೀ ದೇಶದ ಜನತೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡ ಬೇಕಿದೆ. ಅದರಂತೆ ನಮ್ಮ ತಾಲೂಕಿನಲ್ಲಿಯೂ ಗೌರವಯುತವಾಗಿ ಎಲ್ಲರೂ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಜಿ. ಆರ್ ಶಿವಕುಮಾರ್ ಮಾತನಾಡಿ, ದೇಶಭಕ್ತಿ ಅನಾವರಣಕ್ಕೆ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅವಕಾಶ ಕೇಂದ್ರ ಸರ್ಕಾರ ನೀಡಿದೆ. ಅದರಂತೆ ಎಲ್ಲರೂ ಪ್ರತಿ ಮನೆಯ ಮೇಲೆ ರಾಷ್ಟ್ರ ಧ್ವಜ ನಿಯಮಾನುಸಾರ ಹಾರಿಸಿ ನಮ್ಮ ರಾಷ್ಟ್ರೀಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಲಕ್ಷ್ಮಿರಂಗಯ್ಯ, ಮುಖಂಡರಾದ ಬಿ.ಲೋಕೇಶ್, ವಿಶ್ವನಾಥ್, ಸಿದ್ದರಾಜು ಇತರರು ಇದ್ದರು.