ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಾಜಿ ಸಚಿವ ಸಿ.ವೀರಣ್ಣ ನಿಧನ; ಗಣ್ಯರಿಂದ ಸಂತಾಪ

ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಸಿ.ವೀರಣ್ಣ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೊರಟಗೆರೆ (Koratagere) ತಾಲೂಕಿನ ಬುಕ್ಕ ಪಟ್ಟಣದ ನಿವಾಸದಲ್ಲಿದ್ದರು.

ಸಂಗ್ರಹ ಚಿತ್ರ

ತುಮಕೂರು: ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಸಿ.ವೀರಣ್ಣ (C. Viranna) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಕೊರಟಗೆರೆ (Koratagere) ತಾಲೂಕಿನ ಬುಕ್ಕ ಪಟ್ಟಣದ ನಿವಾಸದಲ್ಲಿ ಅವರು ವಿಶ್ರಾಂತಿಯಲ್ಲಿದ್ದರು. ಅಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವೀರಣ್ಣ ಅವರು ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಮತ್ತು ಎಸ್.ಆರ್ ಬೊಮ್ಮಾಯಿ ಸಂಪುಟಗಳಲ್ಲಿ ಸಚಿವರಾಗಿದ್ದರು. ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣ ಗ್ರಾಮದಲ್ಲಿ ಮಕ್ಕಳ ಜೊತೆ ಕೃಷಿ ಜೀವನ ನಡೆಸುತಿದ್ದರು. ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಅವರು, ರಾಜಕೀಯದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದಾರೆ.

1983ರಲ್ಲಿ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ವೀರಣ್ಣ ಅವರು 1984ರಿಂದ 1989ರವರೆಗೆ ಸಚಿವರಾಗಿದ್ದರು. ರಾಮಕೃಷ್ಣ ಹೆಗಡೆ ಮತ್ತು ಬೊಮ್ಮಯಿ ಕಾಲದಲ್ಲಿ ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ, ವಾಣಿಜ್ಯ, ಬಂಧಿಖಾನೆ ಸೇರಿದಂತೆ ಹನ್ನೊಂದು ಇಲಾಖೆಗಳನ್ನು ನಿರ್ವಹಿಸಿದ್ದರು. ಆರೋಗ್ಯ ಸಮಸ್ಯೆಯಿಂದ ಬೋರಿಂಗ್ ಆಸ್ಪತ್ರೆಯಲ್ಲಿ ಕಳೆದ ತಿಂಗಳು ಚಿಕಿತ್ಸೆ ಪಡೆದಿದ್ದರು. ವೀರಣ್ಣ ಅವರ ನಿಧನದ ಸುದ್ದಿ ತಿಳಿದ ತಕ್ಷಣ ರಾಜಕೀಯ ನಾಯಕರು, ಕಾರ್ಯಕರ್ತರು ಮತ್ತು ಸಮುದಾಯದ ಜನರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಚೆನ್ನಮ್ಮ ನಿಧನಕ್ಕೆ ಸಿಎಂ ಡಿಕೆಶಿ, ಸಿದ್ದರಾಮಯ್ಯ, ಜೋಶಿ ಸೇರಿ ಗಣ್ಯರ ಸಂತಾಪ

ಅಪಘಾತ

ಕ್ಯಾಂಟರ್ ವಾಹನ ಹಾಗೂ ರಾಯಲ್ ಎನ್‌ಫೀಲ್ಡ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್ ಸಮೀಪ ನಡೆದಿದೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತ ಸ್ನೇಹಿತರು. ಬೆಳ್ಳಂ ಬೆಳಗ್ಗೆ ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎನ್‌ಫೀಲ್ಡ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Vishakha Bhat Heggar

View all posts by this author