ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆಗೊಳಿಸಿದ ಮಾಜಿ ಸಚಿವ ವೆಂಕಟರಮಣಪ್ಪ

Pavagada News: ಪಾವಗಡ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ, ಅಧಿಕಾರದಲ್ಲಿರುವ ಸಮಯದಲ್ಲಿ ಜನರಿಗೆ ಶಾಶ್ವತವಾಗಿ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ನಿಜವಾದ ಸೇವಾ ತೃಪ್ತಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆ

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿಯನ್ನು ಮಾಜಿ ಸಚಿವ ವೆಂಕಟರಮಣಪ್ಪ ಬಿಡುಗಡೆಗೊಳಿಸಿದರು. -

Profile
Siddalinga Swamy Jan 7, 2026 8:11 PM

ಪಾವಗಡ, ಜ.7: ಪಾವಗಡಕ್ಕೆ ಶಾಶ್ವತ ನೀರು ದೊರಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯ ಕಾರಣ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು. (Pavagada News) ಪಾವಗಡ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಾವಗಡಕ್ಕೆ ಶಾಶ್ವತ ನೀರು ದೊರಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯ ಕಾರಣ. ಅಧಿಕಾರದಲ್ಲಿರುವ ಸಮಯದಲ್ಲಿ ಜನರಿಗೆ ಶಾಶ್ವತವಾಗಿ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ನಿಜವಾದ ಸೇವಾ ತೃಪ್ತಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಜಾತಿ–ಭೇದವಿಲ್ಲದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಗುಂಡೂರಾವ್ ಅವರ ಅವಧಿಯಲ್ಲೂ ವಿದ್ಯುತ್ ಉಚಿತವಾಗಿ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.

ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರದಲ್ಲಿರುವ ಸಮಯದಲ್ಲಿ ಪ್ರಾಮಾಣಿಕವಾಗಿ ಹಾಗೂ ಆತ್ಮಶುದ್ಧಿಯಿಂದ ಜನಸೇವೆ ಮಾಡಿದರೆ ಅದಕ್ಕಿಂತ ದೊಡ್ಡ ಕಾರ್ಯ ಮತ್ತೊಂದಿಲ್ಲ ಎಂದು ಹೇಳಿದರು. ಸರ್ಕಾರಿ ನೌಕರರು ಜನರ ಕಷ್ಟ–ನೋವುಗಳಿಗೆ ಸ್ಪಂದಿಸಿ, ಅರ್ಜಿಗಳು ಹಾಗೂ ಕೆಲಸಗಳನ್ನು ವಿಳಂಬವಿಲ್ಲದೆ ನಿರ್ವಹಿಸಿದರೆ ದೇವರ ಬಳಿ ಬೇಡುವ ಅಗತ್ಯವೇ ಇರುವುದಿಲ್ಲ ಎಂದು ತಿಳಿಸಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಾಗಿ ಕೆಲಸ ಮಾಡಿದರೆ ಪಾವಗಡ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಳಚಿ ಹೋಗುತ್ತದೆ. ಆದ್ದರಿಂದ ಯಾವುದೇ ಕೆಲಸವನ್ನೂ ವಿಳಂಬ ಮಾಡದೆ ನಿಷ್ಕಲ್ಮಶವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ರವಿ ಅವರು, ಸಂಘಕ್ಕೆ ನಿವೇಶನ ಹಾಗೂ ಕಟ್ಟಡ ಕಲ್ಪಿಸಿಕೊಡುವಂತೆ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರ ಪರವಾಗಿ ಮಾಜಿ ಸಚಿವರಿಗೆ ಮನವಿ ಸಲ್ಲಿಸಿದರು.‌

ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಿ: ಆಡಳಿತಾಧಿಕಾರಿಗೆ ಮನವಿ

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ವೈ. ರವಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್, ಖಜಾಂಚಿ ಶೇಖರ್ ಬಾಬು, ರಾಜ್ಯ ಪರಿಷತ್ ಸದಸ್ಯ ಗಂಗಾಧರ, ಕಾರ್ಯದರ್ಶಿ ಮರುತೇಶ ಎಂ.ಎಲ್., ಜಿಲ್ಲಾ ಉಪಾಧ್ಯಕ್ಷ ರಾಕೇಶ್, ಹಿರಿಯ ಉಪಾಧ್ಯಕ್ಷರಾದ ರಾಜಣ್ಣ ಬಿ.ಆರ್. ಹಾಗೂ ನಾಗರಾಜ, ಉಪಾಧ್ಯಕ್ಷರಾದ ಗಂಗಾಧರ ಮತ್ತು ರಾಮಾಂಜಿನೇಯ ಕೆ., ಎಚ್.ಪಿ. ಕಿರಣ್ ಕುಮಾರ್, ಕೆ.ವಿ. ನಾರಾಯಣ್, ರಾಜಗೋಪಾಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.