ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Halemane Shivananjappa: ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) ಅವರು ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ಹಳೇಮನೆ ಶಿವನಂಜಪ್ಪ -

Profile
Siddalinga Swamy Dec 27, 2025 3:37 PM

ತುಮಕೂರು, ಡಿ.27: ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) (Halemane Shivananjappa) ಅವರು‌ ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಗಣನೀಯ ಸೇವೆ

ಹಳೇಮನೆ ಶಿವನಂಜಪ್ಪ ಅವರು ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ಒಕ್ಕೂಟವು ಅನೇಕ ಮೈಲಿಗಲ್ಲುಗಳನ್ನು ಸ್ಥಾಪಿಸಿತ್ತು. ರೈತರ ಹಿತರಕ್ಷಣೆ ಮತ್ತು ಹೈನುಗಾರಿಕೆಯನ್ನು ಲಾಭದಾಯಕವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕೇವಲ ಹಾಲು ಒಕ್ಕೂಟ ಮಾತ್ರವಲ್ಲದೆ, ಜಿಲ್ಲೆಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಯಂಡಮೂರಿ ಕೃತಿಗಳ ಅನುವಾದಕಿ, ಕನ್ನಡ ಲೇಖಕಿ ಸರಿತಾ ಜ್ಞಾನಾನಂದ ನಿಧನ

ಅಂತಿಮ ಸಂಸ್ಕಾರ

ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿದೆ. ಡಿ.28ರಂದು ಭಾನುವಾರ 11 ಗಂಟೆಯ ಸುಮಾರಿಗೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.