ಉಚಿತ ನೇತ್ರ ತಪಾಸಣೆ ಶಿಬಿರ
ಕಣ್ಣು ಮಾನವನ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತಿ ಜಾಗರೂಕತೆಯಿಂದ ಕಾಪಾಡಿ ಕೊಳ್ಳಬೇಕು. ನಮ್ಮ ಸೇವಾ ಸಂಸ್ಥೆಯು ಸತತ 27 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. 8 ಲಕ್ಷ ಕುಟುಂಬಗಳಿಗೆ ಸಾಮಾಜಿಕವಾಗಿ ಸ್ಪಂದಿಸಿದ್ದೇವೆ. ಉಚಿತ ನೇತ್ರ ತಪಾಸಣ ಶಿಬಿರ ಮಾಡಿ ಸಾವಿರಾರು ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ.

ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.

ಚಿಕ್ಕನಾಯಕನಹಳ್ಳಿ : ಕಣ್ಣಿನ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕದ ಅನಿವಾರ್ಯತೆ ಇತ್ತೀಚಿನ ದಿನಗಳಲ್ಲಿ ಪರಿಣಮಿಸುತ್ತಿದೆ. ಆರಂಭದಲ್ಲೇ ತಪಾಸಣೆ ಮಾಡಿಸಿ, ಸಮಸ್ಯೆ ಕಂಡರೆ ಚಿಕಿತ್ಸೆ ಪಡೆಯ ಬೇಕು ಎಂದು ಬಿಎಸ್‌ಎಸ್ ಮೈಕ್ರೋ ಪೈನಾನ್ಸ್ ಸಂಸ್ಥೆಯ ಸಿಒಒ ಪಂಚಾಕ್ಷರಿ ಸಲಹೆ ನೀಡಿದರು.
ಬಿಎಸ್‌ಎಸ್ ಮೈಕ್ರೋ ಪೈನಾನ್ಸ್ ಲಿಮಿಟೆಡ್ ವತಿಯಿಂದ ಅಪೋಲೋ ಫೌಂಡೇಷನ್ ಇವರ ಸಹಯೋಗದೊಂದಿಗೆ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಣ್ಣು ಮಾನವನ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತಿ ಜಾಗರೂಕತೆಯಿಂದ ಕಾಪಾಡಿ ಕೊಳ್ಳಬೇಕು. ನಮ್ಮ ಸೇವಾ ಸಂಸ್ಥೆಯು ಸತತ 27 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. 8 ಲಕ್ಷ ಕುಟುಂಬಗಳಿಗೆ ಸಾಮಾಜಿಕವಾಗಿ ಸ್ಪಂದಿಸಿದ್ದೇವೆ. ಉಚಿತ ನೇತ್ರ ತಪಾಸಣ ಶಿಬಿರ ಮಾಡಿ ಸಾವಿರಾರು ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ.
ಇದನ್ನೂ ಓದಿ: Tumkur (Gubbi) News: ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ
ಸರಕಾರಿ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಗ್ರಾಮೀಣ ನೈರ್ಮಲ್ಯ, ಶಿಕ್ಷಣ ಹಾಗು ನೆರೆ ಯಿಂದ ತತ್ತರಿಸಿದ್ದ ಕೊಡಗು ಜಿಲ್ಲೆಯ ಅನೇಕ ಗ್ರಾಮದ ಸಂತ್ರಸ್ತರಿಗೆ ಪುಡ್ ಕಿಟ್ ವಿತರಣೆ ಮತ್ತು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಕಲಿಕಾ ಸಲಕರಣೆಗಳನ್ನು ಉಚಿತವಾಗಿ ನೀಡಲಾಗಿದೆ. ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿದ್ದರಿಗೆ ಉಚಿತವಾಗಿ ಕನ್ನಡಕ ವಿತರಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮುದ್ದೇನಹಳ್ಳಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ್ ಮಾತನಾಡಿ ಕಣ್ಣನ್ನು ಜೋಪಾನವಾಗಿ ಇಟ್ಟು ಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಪ್ರತಿಯೊಬ್ಬರು ಆರೋಗ್ಯವಂತರಾದರೆ ಸಮಾಜ ಅಭಿವೃದ್ದಿ ಹೊಂದಲು ಸಾಧ್ಯ. ಆರೋಗ್ಯ ರಕ್ಷಣೆಯ ಜೊತೆಗೆ ಕಣ್ಣಿನ ಆರೋಗ್ಯವನ್ನು ಕಾಪಾಡಿ ಕೊಳ್ಳಬೇಕು. ಗ್ರಾಮೀಣ ಭಾಗದ ಮಹಿಳೆಯರಿಗೆ, ಬಡ ಜನರಿಗೆ ಉಚಿತ ತಪಾಸಣೆ ಶಿಬಿರಗಳು ಅನುಕೂಲವಾಗಿದೆ. ಗ್ರಾಮಸ್ಥರು, ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಶಿಬಿರದಲ್ಲಿ 135 ಜನರಿಗೆ ಉಚಿತ ನೇತ್ರ ಪರೀಕ್ಷೆ ನಡೆಸಲಾಯಿತು. ಆರಕ್ಷಕ ನಿರೀಕ್ಷಕಿ ದ್ರಾಕ್ಷಾಯಿಣಿ ಮಾತನಾಡಿದರು. ಬಿಎಸ್‌ಎಸ್ ಸಂಸ್ಥೆಯ ಸಿಇಓ ಕುಮಾರ್, ಮುಖ್ಯ ಸಹಾಯಕ ಪಂಡಿತ್ ಗಂಗಾ ಧರ್, ಉಪ ಸಹಾಯಕ ಪ್ರಶಾಂತ್, ಅಪೊಲೋ ಫೌಂಡೇಷನ್ ಸುಶಾಂತ್ ಉಪಾಧ್ಯಯ, ಪಿಡಿಓ ಶಿವಕುಮಾರ್, ಗ್ರಾ.ಪಂ ಸದಸ್ಯ ಮಲ್ಲೇಶ್, ಚಂದ್ರಶೇಖರಯ್ಯ, ಫಾಮೀದಾ, ಮಾಜಿ ಅಧ್ಯಕ್ಷ ಈಶ್ವರ, ಹಾಗು ಇತರರಿದ್ದರು.