Gubbi News: ವೈಕುಂಠ ಏಕಾದಶಿ ಹಿನ್ನೆಲೆ ಉಚಿತ ಆರೋಗ್ಯ ತಪಾಸಣಾ ಶಿಬಿರ
7 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಎತ್ತಿನಹೊಳೆ ನೀರಾವರಿ ಯೋಜನೆಯು ಶೇಕಡ 90ರಷ್ಟು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಸಂಕಷ್ಟವನ್ನು ತರಬೇಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(KPCC Vice President Muralidhar Halappa) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು
-
ಗುಬ್ಬಿ: ಕೇಂದ್ರ ಸರ್ಕಾರ ಯಾವುದೇ ರೀತಿಯ ವಿಘ್ನವನ್ನು ಮಾಡದೆ ಸುಮಾರು 7 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಎತ್ತಿನಹೊಳೆ ನೀರಾವರಿ ಯೋಜನೆಯು ಶೇಕಡ 90ರಷ್ಟು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಸಂಕಷ್ಟವನ್ನು ತರಬೇಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ(KPCC Vice President Muralidhar Halappa) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: Gubbi News: ಪದಗ್ರಹಣ ಸಮಾರಂಭದಲ್ಲಿ ತಾಲ್ಲೂಕು ಬಿಜೆಪಿ ಸಾರಥ್ಯ ವಹಿಸಿದ ಬಲರಾಮಣ್ಣ
ವೈಕುಂಠ ಏಕಾದಶಿ ಹಬ್ಬದ ವಿಶೇಷವಾಗಿ ತಾಲೂಕಿನ ಹೂವಿನ ಕಟ್ಟೆ ಶ್ರೀ ಗುಡ್ಡದ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಹಾಲಪ್ಪ ಪ್ರತಿಷ್ಠಾನ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗುಬ್ಬಿ ತುರುವೇಕೆರೆ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳ ಸಂಪರ್ಕಿ ಸುವ ಸ್ಥಳ ಕಿಬ್ಬನಹಳ್ಳಿ ಕ್ರಾಸ್ ಬಳಿಯ ಟೋಲ್ ಬಳಿ ಜ.4ರಂದು ನಾಲ್ಕು ತಾಲೂಕುಗಳಿಂದ ಮುಖಂಡರುಗಳು ರೈತರು ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಎತ್ತಿನಹೊಳೆ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುವುದು. ಈ ಸಭೆಗೆ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಕೆಇಬಿ ಎ ಇ ಇ ಕರಿಯಪ್ಪ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯಮ್ಮ, ರಂಗಯ್ಯ, ಬಸವರಾಜು, ಹಾಲಪ್ಪ, ಶಿವಣ್ಣ, ಮೋಹನ್ ಕುಮಾರ್ ನಾರಾಯಣಪ್ಪ, ತಿಮ್ಮಯ್ಯ ಸೇರಿದಂತೆ ಇತರರು ಇದ್ದರು.