ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gruha Jyothi: ಅ.31ರವರೆಗೆ ಗೃಹಜ್ಯೋತಿ ಮರು ಸಮೀಕ್ಷೆ

ಸಮೀಕ್ಷೆಯ ಸಂದರ್ಭದಲ್ಲಿ ಒಟ್ಟು 2,362 ಮನೆಗಳು ಖಾಲಿ ಇರುವ ಅಥವಾ ಬೀಗ ಹಾಕಿರುವುದು ಕಂಡುಬಂದಿದೆ. ಇಂತಹ ಗ್ರಾಹಕರು ಹಾಗೂ ಈವರೆಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯ ವಾಗದವರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಬೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

Gruha Jyothi: ಅ.31ರವರೆಗೆ ಗೃಹಜ್ಯೋತಿ ಮರು ಸಮೀಕ್ಷೆ

-

Profile
Ashok Nayak Oct 19, 2026 8:34 AM

ಪಾವಗಡ: ಬೆಸ್ಕಾಂ(BESCOM) ಮಧುಗಿರಿ ವಿಭಾಗದ ವ್ಯಾಪ್ತಿಗೆ ಒಳಪಡುವ ಮಧುಗಿರಿ, ಸಿರಾ, ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕುಗಳ ಗೃಹಜ್ಯೋತಿ(GruhaJyothi) ಯೋಜನೆಯ ಫಲಾನುಭವಿಗಳ ಮರು ಸಮೀಕ್ಷೆ ಪ್ರಗತಿಯಲ್ಲಿದೆ. ಸಮೀಕ್ಷೆಯ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ವಿವಿಧ ಕಾರಣಗಳಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು ಅ.31ರೊಳಗೆ ಸಂಬಂಧಪಟ್ಟ ಬೆಸ್ಕಾಂ ಉಪವಿಭಾಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದಾಗಿದೆ.

ಮಧುಗಿರಿ ವಿಭಾಗದ ವ್ಯಾಪ್ತಿಯಲ್ಲಿ ಒಟ್ಟು 2,41,215 ಗೃಹಜ್ಯೋತಿ ಫಲಾನುಭವಿಗಳಿದ್ದು, ಈ ಪೈಕಿ 2,33,858 ಗ್ರಾಹಕರ ಸಮೀಕ್ಷೆ ಪೂರ್ಣಗೊಂಡಿದೆ. ಇದು ಒಟ್ಟು ಫಲಾನುಭವಿಗಳ ಶೇ. 96.95 ರಷ್ಟಾಗಿದೆ.

ಇದನ್ನೂ ಓದಿ: Gruha Jyothi Scheme: ಗೃಹ ಜ್ಯೋತಿ ಸಮೀಕ್ಷೆ: ಬೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ದಾಖಲೆ ಸಲ್ಲಿಕೆಗೆ ಅವಕಾಶ

ಇನ್ನೂ 7,393 ಗ್ರಾಹಕರ ಸಮೀಕ್ಷೆ ಬಾಕಿ ಇದ್ದು, ಈ ಪೈಕಿ BJKJ ವರ್ಗವನ್ನು ಹೊರತುಪಡಿಸಿ ಇತರೆ 3,243 ಗ್ರಾಹಕರು ಹಾಗೂ BJKJ ವರ್ಗದ 4,150 ಗ್ರಾಹಕರು ಸೇರಿದ್ದಾರೆ.

ಸಮೀಕ್ಷೆಯ ಸಂದರ್ಭದಲ್ಲಿ ಒಟ್ಟು 2,362 ಮನೆಗಳು ಖಾಲಿ ಇರುವ ಅಥವಾ ಬೀಗ ಹಾಕಿರುವುದು ಕಂಡುಬಂದಿದೆ. ಇಂತಹ ಗ್ರಾಹಕರು ಹಾಗೂ ಈವರೆಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯ ವಾಗದವರು ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಬೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಆದ್ದರಿಂದ ಮಧುಗಿರಿ ವಿಭಾಗದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಮಧುಗಿರಿ ವಿಭಾಗದ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.