ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tiptur News: ಮಣಕೀಕೆರೆಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಭುವನೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ರವಿಕುಮಾರ್, ವಿದ್ಯಾರ್ಥಿಗಳು ಶಾಲೆಯಲ್ಲಿ ಆಯೋಜಿಸುವ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ಅನುಕೂಲವಾಗಲಿದ್ದು, ದೈಹಿಕ ಮತ್ತು ಮಾನಸಿಕವಾಗಿ ಸದೃಢ ವಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕ್ರೀಡೆಯಲ್ಲಿ ಭಾಗವಹಿಸಿದಾಗ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ಅನುಕೂಲಕರ

-

Profile
Ashok Nayak Sep 7, 2026 1:33 PM

ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಣಕೀಕೆರೆ ಶ್ರೀ ಭುವನೇಶ್ವರಿ ಪ್ರೌಢಶಾಲಾ ಆವರಣದಲ್ಲಿ 2026-27 ನೇ ಸಾಲಿನ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಅದ್ದೂರಿಯಾಗಿ ಜರುಗಿತು.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಭುವನೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ರವಿಕುಮಾರ್, ವಿದ್ಯಾರ್ಥಿಗಳು ಶಾಲೆಯಲ್ಲಿ ಆಯೋಜಿಸುವ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾಭ್ಯಾಸಕ್ಕೆ ಮತ್ತು ಆರೋಗ್ಯಕ್ಕೆ ಅನುಕೂಲವಾಗಲಿದ್ದು, ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Tiptur News: ಕೆಐಟಿಯಲ್ಲಿ ನ್ಯಾಷನಲ್ ಇನ್ನೋವೇಶನ್ ಹ್ಯಾಕಥಾನ್- 2026; ವಿಜೇತ ತಂಡಗಳಿಗೆ ಬಹುಮಾನ ವಿತರಣೆ

ಎಸ್ಸಿ/ಎಸ್ಟಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ತಾ. ಅಧ್ಯಕ್ಷ ಡಿ. ಮಹಾಲಿಂಗಯ್ಯ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಂಡು, ಸಮಾಜವನ್ನು ತಿದ್ದುವಂತಹ ಕೆಲಸ ಮಾಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡೆ ಎನ್ನು ವುದು ಬಹು ಮುಖ್ಯವಾದ ಭಾಗ. ಹಾಗಾಗಿ ಕ್ರೀಡೆಯಲ್ಲಿ ಕಡ್ಡಾಯವಾಗಿ ಮತ್ತು ನಿರಂತರ ವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಮೂರ್ತಿ, ಭುವನೇಶ್ವರಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಅಮರ್ ಸಿಂಗ್, ಮುಖ್ಯ ಶಿಕ್ಷಕಿ ಪವಿತ್ರ, ಮುಖಂಡ ನಾರಾಯಣ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ವೇದಾವತಿ, ಸಿ.ಆರ್.ಪಿ ಗಿರೀಶ್, ಶಿವಾನಂದ್, ಅನ್ನಪೂರ್ಣಮ್ಮ, ಸುನಂದ ಹಾಗೂ ಮಹೇಶ್ ಸೇರಿದಂತೆ ಹೋಬಳಿ ಮಟ್ಟದ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.