ತುಮಕೂರು ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಂದ ಮಾಹಿತಿ ತಿಳಿದುಕೊಂಡರು.


ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಂಡಿ ನೋವು ಶುರುವಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಗುರುವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwar) ಅವರಿಂದ ಮಾಹಿತಿ ತಿಳಿದುಕೊಂಡರು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಪರಮೇಶ್ವರ್ ಬಳಿ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ಪರಿಸ್ಥಿತಿ ಬಗ್ಗೆ ವಿಚಾರಿಸಿದರು.
ಸಿದ್ದರಾಮಯ್ಯ ಅವರು ಗುಣಮುಖರಾಗಲು ಎಷ್ಟು ದಿವಸ ಬೇಕು ಎಂದು ಶ್ರೀಗಳು ಕೇಳಿದಾಗ, ಇದಕ್ಕೆ ಉತ್ತರಿಸಿದ ಸಚಿವ ಪರಮೇಶ್ವರ್, ಸಿಎಂ ಕಾಲಿಗೆ ಲೆಗ್‌ಮೆಂಟ್ ಹಾಕಿದ್ದಾರೆ. ಪೂರ್ಣ ಗುಣಮುಖರಾಗಲು ಮೂರ್ನಾಲ್ಕು ತಿಂಗಳ ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಈ ವೇಳೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಆಶೀರ್ವದಿಸಿದರು.
ಈ ಸುದ್ದಿಯನ್ನೂ ಓದಿ | Tumkur News: ತುಮಕೂರು ವಿವಿಯ ಬಿಸಿಯೂಟ ಯೋಜನೆ ಅನ್ನದಾಸೋಹದ ಪ್ರತೀಕ: ವಿ. ಸೋಮಣ್ಣ