ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೌಟುಂಬಿಕ ಕಲಹ; ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪತಿ!

ಕುಡಿದ ಮತ್ತಿನಲ್ಲಿ ಪತಿಯು ಪತ್ನಿ ಜತೆ ಜಗಳವಾಡಿದ್ದಾನೆ. ಈ ವೇಳೆ ಇಬ್ಬರ ನಡುವಿನ ಗಲಾಟೆ ತೀವ್ರಗೊಂಡು, ಆಕ್ರೋಶಗೊಂಡ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಹೆಂಡತಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದರು. ಅವರನ್ನು ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

​ತುಮಕೂರು: ನಗರದ ಎಸ್.ಎಸ್.ಪುರದಲ್ಲಿ ಗಂಡ-ಹೆಂಡತಿ ನಡುವಿನ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ, ಪತಿಯೊಬ್ಬ ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಪವಿತ್ರಾ (33) ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ನಾಗರಾಜು (35) ಎಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ನಾಗರಾಜು ಮೂಲತಃ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಲಕ್ಕೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಗರದ ಎಸ್.ಎಸ್.ಪುರ ಬಳಿ ಎಳೆನೀರು ವ್ಯಾಪಾರ ಮಾಡಿಕೊಂಡಿದ್ದ.

​ಘಟನೆ ನಡೆದದ್ದು ಹೇಗೆ?:

ನಾಗರಾಜು ಕುಡಿದ ಮತ್ತಿನಲ್ಲಿ ಪತ್ನಿ ಪವಿತ್ರಾ ಜತೆ ಜಗಳವಾಡಿದ್ದಾನೆ. ಈ ವೇಳೆ ಇಬ್ಬರ ನಡುವಿನ ಗಲಾಟೆ ತೀವ್ರಗೊಂಡು, ಆಕ್ರೋಶಗೊಂಡ ನಾಗರಾಜು ಮಚ್ಚಿನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಪವಿತ್ರಾ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದರು.

​ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಯಗೊಂಡಿದ್ದ ಪವಿತ್ರಾ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Mangaluru News: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ; ಮಂಗಳೂರಿನ ಚರ್ಚ್‌ ಫಾದರ್‌ ವಿರುದ್ಧ ಪೋಕ್ಸೊ ಕೇಸ್‌ ದಾಖಲು

​ಹಲ್ಲೆ ನಡೆಸಿದ ಆರೋಪಿ ನಾಗರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.