ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA H V Venkatesh: ಪಾವಗಡ ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದಲೋ, ಬೇರೆ ಕ್ಷೇತ್ರದಿಂದಲೋ ಸ್ಪರ್ಧಿಸುತ್ತೇನೆ; ಎಲ್ಲಿಯಾದರೂ ಗೆದ್ದೇ ಗೆಲ್ಲುತ್ತೇನೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಯೋ ಅಥವಾ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆಯೋ ಎಂಬುದನ್ನು ಮುಂದೆ ನಿರ್ಧರಿಸಲಾಗುವುದು. ಆದರೆ ಮುಂಬರುವ ಚುನಾವಣೆಯಲ್ಲಿ ಎಲ್ಲಿಯಾದರೂ ಸ್ಪರ್ಧಿಸಿ ಗೆದ್ದೇ ಗೆಲ್ಲುತ್ತೇನೆ ಶಾಸಕನಾಗಿ ಕೇಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾವಗಡ: ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಬದಲಾವಣೆಯ ವಿಚಾರವಾಗಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್(MLA H V Venkatesh) ನೀಡಿರುವ ಹೇಳಿಕೆ ರಾಜಕೀಯ ವಲಯ ದಲ್ಲಿ ಚರ್ಚೆಗೆ ಕಾರಣವಾಗಿದೆ.

ತಾಲೂಕಿನ ವಳ್ಳೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸು ತ್ತೇನೆಯೋ ಅಥವಾ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆಯೋ ಎಂಬುದನ್ನು ಮುಂದೆ ನಿರ್ಧರಿಸ ಲಾಗುವುದು. ಆದರೆ ಮುಂಬರುವ ಚುನಾವಣೆಯಲ್ಲಿ ಎಲ್ಲಿಯಾದರೂ ಸ್ಪರ್ಧಿಸಿ ಗೆದ್ದೇ ಗೆಲ್ಲುತ್ತೇನೆ ಶಾಸಕನಾಗಿ ಕೇಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸ್ತುತ ಪಾವಗಡ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಮುಂಬರುವ 2028ರ ವಿಧಾನಸಭಾ ಚುನಾವಣೆ(2028 Legislative Assembly Election)ಯ ವೇಳೆಗೆ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಬದಲಾವಣೆ ಯಾಗುವ ಸಾಧ್ಯತೆ ಕುರಿತು ಸಾರ್ವಜನಿಕ ವಲಯ ದಲ್ಲಿ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರ ಹೇಳಿಕೆ ಕುತೂಹಲ ಮೂಡಿಸಿರುವ ಜೊತೆಗೆ ಪಾವಗಡ ವಿಧಾನ ಸಭಾ ಕ್ಷೇತ್ರ ಮೀಸಲು ಕ್ಷೇತ್ರ ದಿಂದ ಸಾಮಾನ್ಯ ಕ್ಷೇತ್ರಕ್ಕೆ ಬದಾಲವಣೆ ಗೂಳ್ಳುತ್ತಿದೆ ಎಂಬುದಕ್ಕೆ ಈ ಹೇಳಿಕೆ ಪುಷ್ಟಿ ನೀಡಿದಂತೆ ಇದೇ. ಇದೇ ವೇಳೆ ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳ ಕುರಿತು ಮಾತನಾಡಿದ ಅವರು, ಈ ಚುನಾವಣೆಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳೇ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Pavagada News: ಖೋ ಖೋ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಲಿಂಗದಹಳ್ಳಿ ಶಾಲೆಯ ಬಾಲಕಿಯರ ತಂಡ ಆಯ್ಕೆ

ತಾಲೂಕಿನ ಅಭಿವೃದ್ಧಿ ಹಾಗೂ ಜನರ ಋಣ ತೀರಿಸುವುದೇ ನನ್ನ ಮುಖ್ಯ ಉದ್ದೇಶವಾಗಿದೆ. ನಮ್ಮ ತಂದೆಯವರು ಹಾಕಿಕೊಟ್ಟ ಹಾದಿಯಲ್ಲಿ ಸಾಗುತ್ತಾ, ಅವರು ಬೆಳೆಸಿದ ವಿಚಾರಧಾರೆಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳೇ ಅವರಿಗೆ ಉತ್ತರ ನೀಡಲಿವೆ. ಯಾರೇ ಟೀಕೆ ಮಾಡಿದರೂ ನನ್ನ ಅಭಿವೃದ್ಧಿ ಕಾರ್ಯಗಳು ಮಾತ್ರ ನಿಲ್ಲುವುದಿಲ್ಲ ಎಂದು ಶಾಸಕ ಹೆಚ್.ವಿ. ವೆಂಕಟೇಶ್ ತಿಳಿಸಿದರು.

ಶಾಸಕರ ಈ ಹೇಳಿಕೆ ಕ್ಷೇತ್ರದ ಮುಂದಿನ ರಾಜಕೀಯ ಬೆಳವಣಿಗೆಗಳು, ಮೀಸಲಾತಿ ಬದಲಾವಣೆ ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಹೊಸ ಚರ್ಚೆಗೆ ವೇದಿಕೆಯಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು: ತಹಶೀಲ್ದಾರ್ ವರದರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಧುಸೂದನ್, ಕಾಂಗ್ರೆಸ್ ಮುಖಂಡ ಬತ್ತಿನೇನಿ ನಾನಿ, ಕರ್ನಾಟಕ ರಾಜ್ಯ ಕಾಂಪೋಸ್ಟ್ ನಿಗಮದ ನಿರ್ದೇಶಕ ರವಿ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ರಾಮಚಂದ್ರರೆಡ್ಡಿ ಹಾಗೂ ಸಂಜುರೆಡ್ಡಿ, ಹಿರಿಯ ಮುಖಂಡರಾದ ಸಕ್ರಪ್ಪ, ಬೊಮ್ಮಯ್ಯ, ಗೋವಿಂದಪ್ಪ, ಚನ್ನಕೇಶವ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ್, ರಾಯಚೂರು ಮುತ್ಯಾಲಪ್ಪ, ರವೀಂದ್ರರೆಡ್ಡಿ ಸೇರಿದಂತೆ ತಾಲೂಕಿನ ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.