ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tiptur News: ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಆ.15 ಕೊನೆಯ ದಿನಾಂಕ

Pratibha Puraskara: ತಿಪಟೂರು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ತಾಲೂಕಿನ ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಘದ ಅಧ್ಯಕ್ಷ ಚಿದಾನಂದ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ತಿಪಟೂರು: ತಿಪಟೂರು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ತಾಲೂಕಿನ (Pratibha Puraskara) ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ ಸಿ, ಪಿಯುಸಿ ಹಾಗೂ ಪದವಿ, ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು, ಆಗಸ್ಟ್‌ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬಗ್ಗೆ ಒಕ್ಕಲಿಗರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಚಿದಾನಂದ್ ಮಾಹಿತಿ ನೀಡಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ತಿಪಟೂರು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ತಾಲೂಕಿನ ಒಕ್ಕಲಿಗರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.



2024 -25 ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕ ಪಡೆದ ಗ್ರಾಮಾಂತರ ವಿದ್ಯಾರ್ಥಿಗಳು ಹಾಗೂ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ನಗರ ಪ್ರದೇಶ ವಿದ್ಯಾರ್ಥಿಗಳು ಮತ್ತು ಎಲ್ಲಾ ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಆಗಸ್ಟ್ 15ರೊಳಗೆ ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿರುವ ಒಕ್ಕಲಿಗರ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್‌ನಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ಖಜಾಂಜಿ ಡಿ.ಬಿ.ಲಕ್ಷ್ಮಣ ಗೌಡ, ಪ್ರತಿಭಾ ಪುರಸ್ಕಾರ ಸಮಿತಿಯ ಅಧ್ಯಕ್ಷರಾದ ದೇವಾನಂದ್, ಕಾರ್ಯದರ್ಶಿ ದೇವರಾಜು, ಖಜಾಂಚಿ ಚಂದ್ರಶೇಖರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | BOB Recruitment 2025: 2,500 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿದ ಬ್ಯಾಂಕ್‌ ಆಫ್‌ ಬರೋಡಾ; ಹೊಸ ಅಪ್‌ಡೇಟ್‌ ಬಗ್ಗೆ ಇಲ್ಲಿದೆ ಮಾಹಿತಿ