ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ? ಕೈ ಕಾರ್ಯಕರ್ತರು ಗರಂ

ಆರ್‌ಎಸ್‌ಎಸ್‌ ಹಾಗೂ ಸರ್ಕಾರದ ನಡುವಿನ ತಿಕ್ಕಾಟದ ನಡುವೆಯೇ ಮಹತ್ವದ ಬೆಳವಣಿಯೊಂದು ನಡೆದಿದ್ದು, ಕೈ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ಎಸ್​ಎಸ್ (RSS) ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ?

-

Vishakha Bhat Vishakha Bhat Oct 26, 2025 4:12 PM

ತುಮಕೂರು: ಆರ್‌ಎಸ್‌ಎಸ್‌ ಹಾಗೂ ಸರ್ಕಾರದ ನಡುವಿನ ತಿಕ್ಕಾಟದ ನಡುವೆಯೇ ಮಹತ್ವದ ಬೆಳವಣಿಯೊಂದು ನಡೆದಿದ್ದು, ಕೈ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ಎಸ್​ಎಸ್ (RSS) ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಸಿಎಂ ಸಿದ್ದರಾಮಯ್ಯಗೆ (CM Siddaramaiah) ಪತ್ರ ಬರೆದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು. ಇದರ ನಡುವೆ ಆರ್​​ಎಸ್​ಎಸ್​ ಕಾರ್ಯಕರ್ತರೊಬ್ಬರನ್ನ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್​​​ಗೆ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಿಪಟೂರಿನ RSS ಸದಸ್ಯ ಡಾ.ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದೆ. ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಟ್ರಸ್ಟ್​​ನ ಮಹಾಪೋಷಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಸರ್ಕಾರ, ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಅಂಕುಶ ಹೇರಿದೆ. ಸರ್ಕಾರ ಈ ನಿಯಮವನ್ನು ಆರ್​ಎಸ್​ಎಸ್​ ಸೇರಿ ಸಾಮಾನ್ಯವಾಗಿ ಎಲ್ಲ ಸಂಘಟನೆಗಳಿಗೆ ಅನ್ವಯವಾಗುವಂತೆ ರೂಪಿಸಿದೆ. ಈ ಮೂಲಕ ಇದರಿಂದ ರಾಜಕೀಯ ವಿವಾದವನ್ನು ತಪ್ಪಿಸಲು ಸರ್ಕಾರ ಎಚ್ಚರಿಕೆ ವಹಿಸಿದೆ. ಸರ್ಕಾರಿ ಆಸ್ತಿಗಳನ್ನು ಇತರೆ ಕಾರ್ಯಕ್ರಮಗಳಿಗೆ ದುರುಪಯೋಗವನ್ನು ತಡೆಯುವುದು ಸರ್ಕಾರದ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: RSS : ನ.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಇ-ಮೇಲ್​ ಮೂಲಕ ಡಿಸಿಗೆ ಅರ್ಜಿ ಸಲ್ಲಿಕೆ

ಇದರ ನಡುವೆ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಪಥ ಸಂಚಲನ ಕುರಿತು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸಲು ಅನುಮತಿ ನಿರಾಕರಿಸಿರುವ ತಹಶೀಲ್ದಾರ್‌ ಕ್ರಮಕ್ಕೆ ಆಕ್ಷೇಪಿಸಿ ಕಲಬುರಗಿ ಆರ್‌ಎಸ್‌ಎಸ್‌ ಜಿಲ್ಲಾ ಸಂಚಾಲಕ ಅಶೋಕ್‌ ಪಾಟೀಲ್‌ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್‌ನ ಕಲಬುರಗಿ ಪೀಠದ ನ್ಯಾಯಮೂರ್ತಿ ಎಂಜಿಎಸ್ ಕಮಲ ವಿಚಾರಣೆ ನಡೆಸಿದರು. ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28 ಕ್ಕೆ ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಮೂರ್ತಿಗಳು ಎಲ್ಲರೂ ಸಹಕಾರ ನೀಡಬೇಕು ಎಂದು ಸೂಚಿಸಿದರು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30 ರ ಮಧ್ಯಾಹ್ನ 2.30 ಕ್ಕೆ ತಿಳಿಸಿ ಆ ದಿನವೇ ವಿಚಾರಣೆ ಮುಂದುವರೆಸಲಾಗುವುದು ಎಂದು ಹೇಳಿದರು.