ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Road Accident: ಜೆಡಿಎಸ್‌ ಮುಖಂಡನ ಕಾರು ಅಪಘಾತ, ಮಹಿಳೆ ಸಾವು, ಇಬ್ಬರಿಗೆ ಗಾಯ

ಹೊಸದಾಗಿ ಖರೀದಿಸಿದ್ದ ಕಾರಿನಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದ ಕುಟುಂಬ ಸದಸ್ಯರು ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಕಾರು ಅಪಘಾತಕ್ಕೀಡಾಗಿದೆ. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಗಂಡ ಹೆಂಡತಿ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದಾರೆ.

ಜೆಡಿಎಸ್‌ ಮುಖಂಡನ ಕಾರು ಅಪಘಾತ, ಮಹಿಳೆ ಸಾವು, ಇಬ್ಬರಿಗೆ ಗಾಯ

ಪಾವಗಡದಲ್ಲಿ ಕಾರು ಅಪಘಾತ

ಹರೀಶ್‌ ಕೇರ ಹರೀಶ್‌ ಕೇರ Feb 23, 2025 8:30 PM

ತುಮಕೂರು: ತುಮಕೂರು (Tumkur news) ಜಿಲ್ಲೆಯ ಜೆಡಿಎಸ್‌ ಮುಖಂಡರೊಬ್ಬರ (JDS leader) ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ (Road Accident) ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರು ಗಂಭೀರವಾಗಿ (two injured) ಗಾಯಗೊಂಡಿದ್ದಾರೆ. ಇಂದು ಸಂಜೆ ಆರು ಗಂಟೆಗೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗೇಟ್ ಸಮೀಪ ಆಕ್ಸಿಡೆಂಟ್ ಸಂಭವಿಸಿದೆ.

ಹೊಸದಾಗಿ ಖರೀದಿಸಿದ್ದ ಕಾರಿನಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದ ಕುಟುಂಬ ಸದಸ್ಯರು ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಕಾರು ಅಪಘಾತಕ್ಕೀಡಾಗಿದೆ. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಗಂಡ ಹೆಂಡತಿ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದಾರೆ. ಪಾವಗಡದ ಸ್ಥಳೀಯ ಜೆಡಿಎಸ್ ಮುಖಂಡ ಶಿವಪ್ಪ ನಾಯಕ ಹಾಗೂ ಅವರ ಧರ್ಮಪತ್ನಿ ಗಂಭೀರವಾಗಿ ಗಾಯಗೊಂಡವರು. ಮತ್ತೊಬ್ಬ ಮಹಿಳೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.

ಪಾವಗಡ ಜೆಡಿಎಸ್ ಮುಖಂಡ ಶಿವಪ್ಪ ಕೆಲವು ದಿನಗಳ ಹಿಂದಷ್ಟೇ ಹೊಸ ಕಾರು ಖರೀದಿಸಿದ್ದರು. ಅದರಲ್ಲಿ ಸಂಬಂಧಿಕರ ಮದುವೆಗೆ ಹೋಗಿದ್ದಾರೆ. ಹೊಸ ಕಾರನ್ನು ಡೆಲಿವರಿ ಕೊಡುವಾಗ ಕಟ್ಟುವ ರಿಬ್ಬನ್ ಕೂಡ ತೆಗೆದಿರಲಿಲ್ಲ. ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ನೀರಿನ ಸಂಪ್‌ಗೆ ಗುದ್ದಿದ್ದಾರೆ. ಸಿಮೆಂಟ್‌ನಿಂದ ನಿರ್ಮಿಸಲಾದ ನೀರಿನ ತೊಟ್ಟಿಗೆ ಡಿಕ್ಕಿ ಹೊಡೆದ ವೇಳೆ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕಾರಿನ ಗಾಜಿನಿಂದ ಸೀದಾ ನೀರಿನ ತೊಟ್ಟಿಯೊಳಗೆ ಬಿದ್ದಿದ್ದಾರೆ.

ಗಾಯಗೊಂಡು ನೀರಿನ ತೊಟ್ಟಿಗೆ ಬಿದ್ದ ಮಹಿಳೆ ಮೇಲೆ ಬರಲಾಗದೇ ಅಲ್ಲಿಯೇ ಸಾವಿಗೀಡಾಗಿದ್ದಾರೆ. ಶಿವಪ್ಪ ಅವರ ಕಾಲು ಮುರಿದುದರಿಂದ ತೊಟ್ಟಿಗೆ ಬಿದ್ದ ಮಹಿಳೆಯ ರಕ್ಷಣೆ ಮಾಡುವುದಕ್ಕೂ ಸಾಧ್ಯವಾಗಿಲ್ಲ. ಅವರ ಪತ್ನಿಯೂ ಗಾಯಗೊಂಡಿದ್ದಾರೆ. ಸ್ಥಳೀಯರು ಬಂದು ನೋಡುವ ವೇಳೆಗೆ ಮಹಿಳೆ ತೊಟ್ಟಿಯಲ್ಲಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯದಿಂದ ನರಳುತ್ತಿದ್ದರು. ನಂತರ ಸ್ಥಳೀಯರ ಸಹಾಯದೊಂದಿಗೆ ಗಾಯಾಳುಗಳಾದ ಶಿವಪ್ಪ ನಾಯಕ ಮತ್ತು ಅವರ ಪತ್ನಿಯನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪ್ರಕರಣ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: Car Accident: ಮಂಗಳೂರಿನಲ್ಲಿ ಭೀಕರ ಕಾರು ಅಪಘಾತ; ಸಿಂಧನೂರು ಶಾಸಕರ ಸೋದರಳಿಯ ಸಾವು