ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KN Rajanna: ಮೂವರು ಪಿತೂರಿ ಮಾಡಿ ಸಚಿವ ಸ್ಥಾನ ತೆಗೆಸಿದ್ದಾರೆ: ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ

KN Rajanna Press Meet: ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಸಮಯ ಬಂದಾಗ ಸಚಿವ ಸ್ಥಾನವನ್ನು ತೆಗೆದುಕೊಳ್ಳುತ್ತೇನೆ. ಆದರೆ ಈಗ ನಾನು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ತುಮಕೂರಿನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರು: ನನ್ನ ಸಚಿವ ಸ್ಥಾನ ತೆಗೆಯುವುದು ಮುಖ್ಯಮಂತ್ರಿಗೆ ಗೊತ್ತಿರಲಿಲ್ಲ. ಮೂವರು ದೆಹಲಿಯಲ್ಲಿ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮನವೊಲಿಸಲು ಯತ್ನಿಸಿದ್ದಾರೆ ಆದರೆ ಅದು ಆಗಿಲ್ಲ. ದೆಹಲಿಗೆ ಹೋಗಿ ಬಂದ ಮೇಲೆ ಸಿಹಿ ಸುದ್ದಿ ಕೊಡುತ್ತೇನೆ ಎಂದು ಶಾಸಕ, ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಬಡವರ ಪರವಾಗಿ ಕೆಲಸ ಮಾಡುತ್ತಾರೆ ಹಾಗಾಗಿ ಖುಷಿ ಇದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾಗ ರಾಹುಲ್ ಗಾಂಧಿ ಅವರು ಕರೆ ಮಾಡಿದ್ದರು. ಕಾರಣ ಏನಿದೆ ಅಂತ ನನಗೆ ಗೊತ್ತಿಲ್ಲ. ಯಾವುದೇ ಸ್ಟೇಟ್ಮೆಂಟ್ ಅಂತಲ್ಲ, ಸತ್ಯವನ್ನೇ ನಾನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಗೆ ಬರುವಂತೆ ರಾಜಣ್ಣಗೆ ಶ್ರೀರಾಮುಲು ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿ, ಮಾಜಿ ಸಚಿವ ಶ್ರೀರಾಮುಲು ಪ್ರೀತಿ ಮತ್ತು ವಿಶ್ವಾಸದಿಂದ ಹಾಗೆ ಹೇಳಿಕೆ ನೀಡಿರಬಹುದು. ಶ್ರೀರಾಮುಲು ಹೇಳಿದರು ಅಂತ ಬಿಜೆಪಿಗೆ ಹೋಗಲು ಆಗುತ್ತಾ? ಕಾಂಗ್ರೆಸ್ ನನಗೇನು ಕಡಿಮೆ ಮಾಡಿದೆ ಎಂದು ಪ್ರಶ್ನಿಸಿದರು.



ಇನ್ನೊಂದು 20 ಸೀಟು ಬಂದಿದ್ದರೆ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಿದ್ದರು. ರಾಜಕಾರಣದಲ್ಲಿ ಏಳು ಬೀಳು ಹೊಸದಲ್ಲ, ಸೋಲು ಗೆಲುವನ್ನು ಒಂದೇ ರೀತಿ ಸ್ವೀಕಾರ ಮಾಡುತ್ತೇನೆ. ನಾನು ಯಾವತ್ತೂ ಸ್ವಾರ್ಥಕೋಸ್ಕರ ಸುಳ್ಳು ಹೇಳಿಲ್ಲ, ಬೇರೆಯವರ ಅನುಕೂಲಕ್ಕಾಗಿ ಸುಳ್ಳು ಹೇಳುತ್ತೇನೆ. ನಿಮಗೆ ಅಧಿಕಾರ ಇಲ್ಲದಿದ್ದರೂ ಪರವಾಗಿಲ್ಲ, ಜನರ ಪ್ರೀತಿ ಉಳಿಸಿಕೊಂಡಿರುವ ಶಕ್ತಿ ದೇವರು ಕೊಡಲಿ. ಸಮಯ ಬಂದಾಗ ಸಚಿವ ಸ್ಥಾನವನ್ನು ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ

ನಾನು ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಸಮಯ ಬಂದಾಗ ಸಚಿವ ಸ್ಥಾನವನ್ನು ತೆಗೆದುಕೊಳ್ಳುತ್ತೇನೆ. ಆದರೆ ಈಗ ನಾನು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಹಳ್ಳಿಗಳಲ್ಲಿ ಮತಗಳವು ಮಾಡುವುದು ಕಷ್ಟ. ಹಳ್ಳಿಯ ಜನರು ನಕಲಿ ಓಟು ಹಾಕಿಸಲು ಬಿಡುವುದಿಲ್ಲ. ಆದರೂ ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರಿಗೆ ತಿಳಿಹೇಳಬೇಕು. ನಗರ ಪ್ರದೇಶದಲ್ಲಿ ಮತಗಳ್ಳತನ ಮಾಡಬಹುದು ಎಂದು ಸ್ಪಷ್ಟಪಡಿಸಿದರು.

ಬಡವರ ಪರ ಉತ್ತಮ ಆಡಳಿತ ನೀಡಿದಂತಹ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಸರ್ಕಾರವನ್ನು ವಜಾ ಮಾಡಲಾಯಿತು. ಇದಲ್ಲದೆ ಮಾಜಿ ಮುಖ್ಯಮಂತ್ರಿ ಎಂ.ವಿ.ವೀರಪ್ಪ ಮೊಯ್ಲಿ ಅವರು ಬಡವರ ಮಕ್ಕಳಿಗೆ ಅನುಕೂಲವಾಗಲೆಂದು ಸಿಇಟಿ ಜಾರಿಗೆ ತಂದರು. ಅಂತಹವರನ್ನು ಅಧಿಕಾರದಿಂದ ಇಳಿಸಲಾಯಿತು. ಅಂತಹ ಹಿರಿಯರು ಅಧಿಕಾರ ಕಳೆದುಕೊಂಡ ಮೇಲೆ ನನ್ನ ಸಚಿವ ಸ್ಥಾನ ಹೋಗಿರುವುದು ನನಗೇನು ಬೇಸರ ಇಲ್ಲ ಎಂದು ತಿಳಿಸಿದರು.

ನನ್ನ ಸಚಿವ ಸ್ಥಾನದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಆಕ್ಷೇಪ ಎತ್ತುವುದು ಸರಿಯಲ್ಲ. ಎಲ್ಲರೂ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ಮಧುಗಿರಿ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು 35 ಸಾವಿರ ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Gubbi News: ಕೆ.ಎನ್.ರಾಜಣ್ಣ ಪರ ಬ್ಯಾಟಿಂಗ್ ಮಾಡಿದ ಗುಬ್ಬಿ ವಾಲ್ಮೀಕಿ ಮುಖಂಡರು

ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ಹರಿಸುವುದು ನನ್ನ ಮುಖ್ಯ ಗುರಿಯಾಗಿದೆ. ಅಷ್ಟೇ ಅಲ್ಲದೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ದಿ ಮಾಡುವುದಾಗಿ ಹೇಳಿದರು.