ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Koratagere News: ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್: ಆರೋಪಿ ಬಂಧನ, 137 ಸಿಲಿಂಡರ್‌ ವಶ

Koratagere News: ಕೋಳಿ ಶೆಡ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆಯ ಮೇಲೆ ಕೊರಟಗೆರೆ ಪಿಎಸ್‌ಐ ಚೇತನ್‌ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ, 137 ಸಿಲಿಂಡರ್, ಒಂದು ಟಾಟಾ ಇಂಟ್ರಾ ಗೂಡ್ಸ್ ಗಾಡಿ ಸಮೇತ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಬಳಿ ಶನಿವಾರ ತಡರಾತ್ರಿ ಜರುಗಿದೆ.

ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಬಳಿ ಕೋಳಿ ಶಡ್‌ನಲ್ಲಿ ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ.

ಕೊರಟಗೆರೆ: ಕೋಳಿ ಶೆಡ್‌ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆಯ ಮೇಲೆ ಕೊರಟಗೆರೆ ಪಿಎಸ್‌ಐ ಚೇತನ್‌ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ, 137 ಸಿಲಿಂಡರ್, ಒಂದು ಟಾಟಾ ಇಂಟ್ರಾ ಗೂಡ್ಸ್ ಗಾಡಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ (Koratagere News) ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಬಳಿ ಶನಿವಾರ ತಡರಾತ್ರಿ ಜರುಗಿದೆ.

ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಸಮೀಪ ಬುಕ್ಕಾಪಟ್ಟಣ ಸರ್ವೆ ನಂ.98 ರಲ್ಲಿ ಫಾತಿಮಾ ಬಿನ್ ಸೈಯದ್ ಜಮೀಲ್ ಬಾಷ ಎನ್ನುವವರಿಗೆ ಸೇರಿದ ಕೋಳಿ ಫಾರಂ ಶೆಡ್‌ನಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳನ್ನು ಫಿಲ್ಲಿಂಗ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಚೇತನ್‌ ಕುಮಾರ್ ಅವರ ತಂಡ ದಾಳಿ ನಡೆಸಿ, ಬಡವರಿಗೆ ನೀಡುವ ಉಜ್ವಲ್ ಯೋಜನೆಯ ಗೃಹ ಬಳಕೆಯ 75 ಸಿಲಿಂಡರ್ ಹಾಗೂ 62 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಹಾಗೂ ಒಂದು ಗೂಡ್ಸ್ ಗಾಡಿ ಮತ್ತು ಆಕ್ಟೀವಾ ಬೈಕ್ ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ರಘು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ | Honeytrap Case: ಪ್ರೀತಿ, ಮದುವೆ ಹೆಸರಲ್ಲಿ ನಾಲ್ವರಿಗೆ ವಂಚನೆ; ಮಹಿಳೆ ವಿರುದ್ಧ ಕೇಸ್‌ ದಾಖಲು

ಘಟನಾ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಅನಿಲ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಸಿಬ್ಬಂದಿಗಳಾದ ಎಎಸ್‌ಐ ಗಂಗಾಧರಪ್ಪ, ಪೇದೆಗಳಾದ ದೊಡ್ಡಲಿಂಗಯ್ಯ, ಮೋಹನ್, ದಯಾನಂದ್, ರಾಮಚಂದ್ರ, ನವೀನ್, ಸಿದ್ದರಾಮು ಸೇರಿದಂತೆ ಇತರರು ಇದ್ದರು.