ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Koratagere News: ಟಾಟಾ ಏಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ; ಪ್ರವಾಸದಿಂದ ವಾಪಸ್‌ ಆಗುವಾಗ ಘಟನೆ

Koratagere News: ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಕ್ರಾಸಿನ ಬಳಿ ಅಪಘಾತ ನಡೆದಿದೆ.

Koratagere News: ಟಾಟಾ ಏಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ; ಪ್ರವಾಸದಿಂದ ವಾಪಸ್‌ ಆಗುವಾಗ ಘಟನೆ

Profile Prabhakara R Jan 4, 2025 3:40 PM
ಕೊರಟಗೆರೆ: ಹೊರ ಸಂಚಾರ ಮುಗಿಸಿಕೊಂಡು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ (Koratagere News) ಮಾವತ್ತೂರಿನ ಸಮೀಪ ಗೌಡನ ಕುಂಟೆ ಗೇಟ್ ಬಳಿ ಘಟನೆ ನಡೆದಿದೆ. ಗಾಯಾಳು ಮಕ್ಕಳಿಗೆ ದೊಡ್ಡ ಸಾಗ್ಗೆರೆ ಆಸ್ಪತ್ರೆ ಹಾಗೂ ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
image-6a98ea4f-2169-48c7-87d6-6df05ec35775.jpg
50ಕ್ಕೂ ಹೆಚ್ಚು ಮಕ್ಕಳನ್ನು ಶೈಕ್ಷಣಿಕ ಪ್ರವಾಸದಿಂದ ವಾಪಸ್ ಕರೆದೊಯ್ಯುತ್ತಿದ್ದ ಟಾಟಾ ಏಸ್‌‌ ವಾಹನ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ 15ಕ್ಕೂ ಹೆಚ್ಚು ಮಕ್ಕಳಿಗೆ ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಕೋಳಾಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಯೋಗೇಶ್ ಮತ್ತು ತಂಡ ಭೇಟಿ ನೀಡಿ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮಂಜುನಾಥ್, ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಕೊಳಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
image-90b3eac8-d41b-4865-9ed7-2d5852fefa24.jpg
ಶಾಲಾ ಮಕ್ಕಳು ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾದ ವಿಷಯ ತಿಳಿದ ತಕ್ಷಣ ಕೊರಟಗೆರೆ ಸರ್ಕಾರಿ ಆಸ್ಪತ್ರೆ ವೈದ್ಯರು ಅಲರ್ಟ್ ಆಗಿದ್ದು, ಮಕ್ಕಳು ಆಸ್ಪತ್ರೆಗೆ ಬಂದ ತಕ್ಷಣ ಚಿಕಿತ್ಸೆ ನೀಡಲಾಗಿದೆ. ಆತಂಕಗೊಂಡ ಪೋಷಕರು ಸರ್ಕಾರಿ ಆಸ್ಪತ್ರೆಗೆ ಧಾವಿಸಿದ್ದಾರೆ. 4 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಕ್ಕಳಿಗೆ ತುರ್ತು ಚಿಕಿತ್ಸೆ ಕೊಡಿಸಲು ಗೃಹ ಸಚಿವ‌ ಡಾ. ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಆಸ್ಪತ್ರಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಮಕ್ಕಳ ಜೀವದ ಜತೆ ಶಿಕ್ಷಕ ಚೆಲ್ಲಾಟವಾಡಿದ್ದು, 50ಕ್ಕೂ ಹೆಚ್ಚು ಮಕ್ಕಳನ್ನು ಟಾಟಾ ಏಸ್‌ನಲ್ಲಿ ಕರೆದುಕೊಂಡು ಹೋಗಲು ಅನುಮತಿ ಕೊಟ್ಟವರು ಯಾರು? ಕೊರಟಗೆರೆ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಇಂತಹ ಅನಾಹುತಗಳಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸೂಕ್ತ ವ್ಯವಸ್ಥೆ ಇಲ್ಲದೆ ಮಕ್ಕಳನ್ನು ಖಾಸಗಿ ವಾಹನದಲ್ಲಿ ಕರೆದೊಯ್ದ ಶಿಕ್ಷಕನ ವಿರುದ್ಧ ಕ್ರಮ ಆಗ್ರಹ ಕೇಳಿಬಂದಿದೆ. ಅಪಘಾತವಾದ ಸಮಯದಲ್ಲಿ ಶಾಲಾ ಶಿಕ್ಷಕನೇ ಟಾಟಾ ಏಸ್‌ ಅನ್ನು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ | Madhugiri News: ಠಾಣೆಯಲ್ಲೇ ಮಹಿಳೆ ಜತೆ ಚಕ್ಕಂದ; ಮಧುಗಿರಿ ಡಿವೈಎಸ್ಪಿ ಅರೆಸ್ಟ್
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಅಕ್ಕ-ತಂಗಿ ದುರ್ಮರಣ
ಬೆಂಗಳೂರು: ನಗರದಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನಕ್ಕೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ನಡೆದಿದೆ.
ಥಣಿಸಂದ್ರ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಗೋವಿಂದಪುರದ ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಎಂದು ಗುರುತಿಸಲಾಗಿದೆ. ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯರು ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದ್ದು, ಮೃತರು ಅಕ್ಕ-ತಂಗಿ ಎಂದು ತಿಳಿದುಬಂದಿದೆ.