ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬುದ್ಧ, ಬಸವಣ್ಣ, ಅಂಬೇಡ್ಕರ್ ಬಗ್ಗೆ ಅವಹೇಳನ; ವೇದಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ದಲಿತ ಪರ ಸಂಘಟನೆಗಳ ಆಗ್ರಹ

ಅಂಬೇಡ್ಕರ್, ಬುದ್ಧ, ಬಸವಣ್ಣನವರ ಬಗ್ಗೆ ವೇದಮೂರ್ತಿ ಎಂಬಾತ ಅವಹೇಳನಕಾರಿ ಮತ್ತು ಅಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದು, ಆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಠಿಣ ಕ್ರಮಕ್ಕೆ ಕೊರಟಗೆರೆ ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಅಂಬೇಡ್ಕರ್ ಬಗ್ಗೆ ಅವಹೇಳನ; ವೇದಮೂರ್ತಿ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ

-

Prabhakara R
Prabhakara R Sep 7, 2026 11:16 PM

ಕೊರಟಗೆರೆ: ಸಂವಿಧಾನ ಶಿಲ್ಪಿ ಬಿ.ಆ‌ರ್.ಅಂಬೇಡ್ಕ‌ರ್, ಬುದ್ಧ, ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕೆ.ಆ‌ರ್.ಪೇಟೆ ತಾಲೂಕಿನ ದೊಡ್ಡಯಾಚೆನಹಳ್ಳಿಯ ವೇದಮೂರ್ತಿ ಎನ್ನುವ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಕೊರಟಗೆರೆ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಕೊರಟಗೆರೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಮನವಿ ಪತ್ರ ಸಲ್ಲಿಸಲಾಗಿದೆ.

ಈ ಬಗ್ಗೆ ಹಿರಿಯ ಹೋರಾಟಗಾರ ದಾಡಿ ವೆಂಕಟೇಶ್ ಮಾತನಾಡಿ, ಅಂಬೇಡ್ಕರ್, ಬುದ್ಧ, ಬಸವಣ್ಣನವರ ಬಗ್ಗೆ ವೇದಮೂರ್ತಿ ಅವಹೇಳನಕಾರಿ ಮತ್ತು ಅಕ್ಷೇಪಾರ್ಹ ಪದ ಬಳಸಿ ಮಾತನಾಡಿದ್ದಾನೆ. ಆ ವಿಡಿಯೊಗಳು ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ವಿಡಿಯೊದಲ್ಲಿ ದಲಿತ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಸಂವಿಧಾನ ಮತ್ತು ಮೀಸಲಾತಿ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾನೆ. ಈತನ ಈ ಮಾತುಗಳು ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ. ಸಮಾಜದಲ್ಲಿ ಅಶಾಂತಿ, ಸೌಹಾರ್ದಕ್ಕೆ ಧಕ್ಕೆ ಆಗುವ ಪರಿಸ್ಥಿತಿ ಸೃಷ್ಟಿಸುವ ಸಾಧ್ಯತೆ ಇದೆ. ಈತನ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು. ಈತನನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಮುಖ ಬೇಡಿಕೆಗಳು :

  1. ಬುದ್ಧ, ಬಸವ, ಅಂಬೇಡ್ಕ‌ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ವೇದಮೂರ್ತಿಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು.
  2. ವೇದಮೂರ್ತಿಗೆ ಕಾನೂನಾತ್ಮಕ ಜೀವಾವದಿ ಶಿಕ್ಷೆ ವಿಧಿಸುವುದು.
  3. ಬುದ್ಧ, ಬಸವ, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವವನ ಬೆಂಬಲವಾಗಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸುವ ವ್ಯಕ್ತಿ ಮತ್ತು ಗುಂಪುಗಳನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿವುದು.
  4. ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರ ಮಟ್ಟದ ಮೀಸಲಾತಿ ವಿರೂಧಿ ಅಥವಾ ಮೀಸಲಾತಿ ಅಠಾವೋಕ್ಕೆ ಬೆಂಬಲಿಸುವ ವ್ಯಕ್ತಿ/ಸಂಘಟನೆಯನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವುದು.

ದಲಿತ ಮುಖಂಡ ಚಿಕ್ಕಪ್ಪಯ್ಯ ಮಾತನಾಡಿ ಸರ್ಕಾರದ ಘನವೆತ್ತ ರಾಜ್ಯಪಾಲರು ನಮ್ಮ ಬೇಡಿಕೆಗಳನ್ನು ಈಡೇರಿಸುವ ಮೂಲಕ ಐತಿಹಾಸಿಕವಾಗಿ ನೊಂದ ಸಮಾಜದ ಹಿತವನ್ನು ಕಾಪಾಡಬೇಕೆಂದು ಆಗ್ರಹಿಸುತ್ತೇವೆ. ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದ ಪಕ್ಷದಲ್ಲಿ ದಲಿತ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು, ಅಂಬೇಡ್ಕರ್ ಅಭಿಮಾನಿಗಳು ಕೊರಟಗೆರೆ ತಾಲೂಕಿನಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕಪ್ಪಯ್ಯ, ರಾಮಾಂಜನೇಯ, ದಲಿತ್ ಆನಂದ್, ಮಂಜುನಾಥ್, ಶಿವರಾಮಯ್ಯ, ಸಿದ್ದಗಂಗಯ್ಯ, ತಿಮ್ಮರಾಜು, ಗಂಗಣ್ಣ,ರಾಜಣ್ಣ, ವೀರಖ್ಯಾತಯ್ಯ (ವಿ ಕೆ ಆರ್),ಸಿದ್ದೇಶ್ ನೇಗಲಾಲ ಸೇರಿದಂತೆ ಹಲವು ಮುಖಂಡರು, ಅಂಬೇಡ್ಕರ್ ಅಭಿಮಾನಿಗಳು ಹಾಜರಿದ್ದರು.