ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್

Tumkur News: ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದಲ್ಲಿ ಎಡ ಮತ್ತು ಬಲ ಪಂಗಡಗಳ ನಡುವಿನ ತಿಕ್ಕಾಟ ತೀವ್ರಗೊಳ್ಳುತ್ತಿರುವುದು ಶೋಚನೀಯ. ಇದರೊಂದಿಗೆ ಹಿಂದುಳಿದ ವರ್ಗಗಳಲ್ಲೂ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದ್ದು, ಸಣ್ಣಪುಟ್ಟ ವಿಚಾರಗಳಿಗೆ ಕಿತ್ತಾಡಿದರೆ ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್ ಎಚ್ಚರಿಸಿದ್ದಾರೆ.

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಎಸ್.ಟಿ. ಶ್ರೀನಿವಾಸ್

-

Profile
Siddalinga Swamy Sep 19, 2026 5:59 PM

ತುಮಕೂರು, ಸೆ.19: ಅಹಿಂದ ವರ್ಗದ ಪ್ರತಿಯೊಂದು ಸಮುದಾಯವು ತನ್ನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದಾಗದಿದ್ದರೆ ಭವಿಷ್ಯದಲ್ಲಿ ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ. ಎಡ-ಬಲ ಎಂಬ ವಿಂಗಡಣೆಗೆ ಬಲಿಯಾದರೆ ಆಯುಧ ಪೂಜೆಯಲ್ಲಿ ವಾಹನದ ಚಕ್ರಕ್ಕೆ ಸಿಲುಕುವ ನಿಂಬೆಹಣ್ಣಿನಂತಹ ದುಸ್ಥಿತಿ ನಮಗಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ. ನಗರದ (Tumkur News) ಕನ್ನಡ ಭವನದಲ್ಲಿ ಅರುಣೋದಯ ಸಹಕಾರ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದಲ್ಲಿ ಎಡ ಮತ್ತು ಬಲ ಪಂಗಡಗಳ ನಡುವಿನ ತಿಕ್ಕಾಟ ತೀವ್ರಗೊಳ್ಳುತ್ತಿರುವುದು ಶೋಚನೀಯ. ಇದರೊಂದಿಗೆ ಹಿಂದುಳಿದ ವರ್ಗಗಳಲ್ಲೂ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದ್ದು, ಸಣ್ಣಪುಟ್ಟ ವಿಚಾರಗಳಿಗೆ ಕಿತ್ತಾಡಿದರೆ ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ (ಅಹಿಂದ) ಸಮುದಾಯಗಳು ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ರಂಗದಲ್ಲಿ ಸ್ವಾವಲಂಬನೆ ಸಾಧಿಸಲು ಕೇವಲ ಸಂಘಟನೆಗಳು ಸಾಲದು, ಪರಸ್ಪರ ನಂಬಿಕೆ ಮತ್ತು ಸೌಹಾರ್ದತೆ ಅತ್ಯಗತ್ಯ ಎಂದರು.

ಲಿಡ್ಕರ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್. ನಟರಾಜ್ ಮಾತನಾಡಿ, ಸಮುದಾಯಗಳು ಬಲಗೊಳ್ಳಲು ಸಹಕಾರ ಸಂಘಗಳ ಬೆಳವಣಿಗೆ ಮತ್ತು ಸದಸ್ಯರ ಸಹಕಾರ ಬಹಳ ಮುಖ್ಯ ಎಂದರು.‌

ಪ್ರಗತಿ ಪಥದಲ್ಲಿ ತುಮಕೂರು ಪಟ್ಟಣ ಕ್ರೆಡಿಟ್ ಸೊಸೈಟಿ: ಪಿ.ಆರ್. ದೇವರಾಜು

ಕಾರ್ಯಕ್ರಮದಲ್ಲಿ ಮೈಸೂರಿನ ಕಾಂಗ್ರೆಸ್ ಮುಖಂಡ ಹಾಗೂ ದೇವರತ್ನ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ನಿವೃತ್ತ ಕುಲಸಚಿವ ನರಸಿಂಹಮೂರ್ತಿ, ಪಿಡಬ್ಲ್ಯುಡಿ ನಿವೃತ್ತ ಮುಖ್ಯ ಎಂಜಿನಿಯರ್ ಶಿವಕುಮಾರ್, ಸಹಕಾರ ಸಂಘದ ಅಧ್ಯಕ್ಷ ಡಾ. ಎಲ್. ಮುಕುಂದ, ಉಪಾಧ್ಯಕ್ಷ ಡಾ. ಹನುಮಂತರಾಯಪ್ಪ, ಗೂಳರಿವೆ ನಾಗರಾಜು ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.