ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkanayakanahalli News: ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ : ಪೂರ್ವಭಾವಿ ಸಭೆ ಹಾಗು ಸಮಿತಿ ರಚನೆ

ಜನ-ಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ಸಾರ್ವಜನಿಕರ ಸಹಭಾ ಗಿತ್ವ ಅತ್ಯಗತ್ಯ. ಈ ವರ್ಷ ನಮ್ಮ ತಾಲ್ಲೂಕಿನಲ್ಲಿ ಎರಡನೇ ಕೆರೆಯಾಗಿ ಬಡಕೆಗುಡ್ಲು ಕೆರೆಯನ್ನು ಆಯ್ಕೆ ಮಾಡಿಕೊಳ್ಳ ಲಾಗಿದೆ. ಈಗಾಗಲೇ ತಿಮ್ಮನಹಳ್ಳಿಯ ಕೆರೆಯನ್ನು ಹೂಳೆತ್ತಿಸಿ ಹಸ್ತಾಂತರಿಸಲಾಗಿದೆ

ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

-

Ashok Nayak
Ashok Nayak Dec 12, 2025 9:40 PM

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ಕಂದಿಕೆರೆ ಹೋಬಳಿಯ ತಿಮ್ಮನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೆಗುಡ್ಲು ಬಕ್ಕನಕಟ್ಟೆಯಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹೂಳೆ ತ್ತುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

sಸಭೆಯಲ್ಲಿ ಭಾಗವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಪ್ರೇಮಾನಂದ್ ಧರ್ಮಸ್ಥಳ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಕೆರೆ ಉಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಜನ-ಜಾನುವಾರುಗಳಿಗೆ ಮುಂದಿನ ದಿನಗಳಲ್ಲಿ ನೀರಿನ ಸೌಲಭ್ಯ ಒದಗಿಸಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಈ ವರ್ಷ ನಮ್ಮ ತಾಲ್ಲೂಕಿನಲ್ಲಿ ಎರಡನೇ ಕೆರೆಯಾಗಿ ಬಡಕೆಗುಡ್ಲು ಕೆರೆಯನ್ನು ಆಯ್ಕೆ ಮಾಡಿಕೊಳ್ಳ ಲಾಗಿದೆ. ಈಗಾಗಲೇ ತಿಮ್ಮನಹಳ್ಳಿಯ ಕೆರೆಯನ್ನು ಹೂಳೆತ್ತಿಸಿ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Tumkur News: ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ವಿಶ್ವೇಶ್ವರ ಭಟ್‌ ಕರೆ

ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ ಮಾತನಾಡಿ ಧರ್ಮಸ್ಥಳ ಯೋಜನೆಯು ಮಹಿಳಾ ಸಬಲೀಕರಣ, ಸಮುದಾಯ ಅಭಿವೃದ್ದಿ ಹಾಗು ಜನ ಮಂಗಳದAತಹ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದೆ. ಇವುಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಗೌರಮ್ಮ ಅವರು ಯೋಜನೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಕೆರೆಯ ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಲು ಇದೇ ಸಂದರ್ಭದಲ್ಲಿ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ರಾಮಚಂದ್ರಪ್ಪ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ, ಕಾರ್ಯದರ್ಶಿಯಾಗಿ ಪ್ರೇಮಾ ನಂದ್, ಜೊತೆ ಕಾರ್ಯದರ್ಶಿಯಾಗಿ ನವೀನಕುಮಾರ್, ಕಾರ್ಯಕಾರಿಣಿ ಸದಸ್ಯರಾಗಿ ಮಲ್ಲಪ್ಪ, ರಂಗೇಗೌಡ್ರು, ಲಕ್ಷ್ಮಯ್ಯ, ಗೋವಿಂದಪ್ಪ, ಮೂಡ್ಲಪ್ಪ, ತೊಳಸಮ್ಮ, ಹಾಗು ಲಕ್ಷೀ ದೇವಿ ಯವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೃಷಿ ಮೇಲ್ವಿಚಾರಕ ಪ್ರಕಾಶ್, ಮೇಲ್ವಿಚಾರಕಿ ಗಾಯತ್ರಿ, ಸೇವಾಪ್ರತಿನಿಧಿಗಳಾದ ತಿಮ್ಮಣ್ಣ, ವಿಜಯಲಕ್ಷೀ, ಗ್ರಾ.ಪಂ.ಸದಸ್ಯರಾದ ಪಾರ್ವತಮ್ಮ, ಗೋವಿಂದರಾಜು ಹಾಗು ಗ್ರಾಮಸ್ಥರು ಹಾಜರಿದ್ದರು.