Land Encroachment: ಹಿರೇಗುಂಡಗಲ್ಲು ಆಂಜನೇಯ ದೇವಾಲಯ ಜಾಗ ಒತ್ತುವರಿ; ಕ್ರಮಕ್ಕೆ ಒತ್ತಾಯ
Land Encroachment: ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜಾಗವನ್ನು ಪ್ರಭಾವ ಬಳಸಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ತಡೆಗೋಡೆಯನ್ನು ಕೆಡವಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತುಮಕೂರು: ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಪಂ ವ್ಯಾಪ್ತಿಯ ಹಿರೇಗುಂಡಗಲ್ಲು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜಾಗವನ್ನು ಪ್ರಭಾವ ಬಳಸಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ತಡೆಗೋಡೆಯನ್ನು ಕೆಡವಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ದೇವಾಲಯದ ಜೀರ್ಣೋದ್ಧಾರಕ್ಕೆ ತೊಂದರೆಯಾಗಿದೆ. ಒತ್ತುವರಿಯನ್ನು ತೆರವುಗೊಳಿಸಿ, ದೇವಾಲಯದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಸರ್ವೆ ನಂ. 263ಕ್ಕೆ ಹೊಂದಿಕೊಂಡಂತೆ 80x270 ಗಜ ಅಳತೆಯಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ವಿಸ್ತೀರ್ಣವಿದ್ದು, ಈ ಜಾಗವನ್ನು ರಾಜಕೀಯ ಪ್ರಭಾವ ಬಳಸಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಅಧಿಕಾರಿಗಳು ಖಾತೆ ಮಾಡಿಕೊಟ್ಟಿದ್ದಾರೆ. ಇದರಿಂದ ದೇವಾಲಯಕ್ಕೆ ಧಕ್ಕೆ ಉಂಟಾಗಿದೆ.
ಒತ್ತುವರಿ ತೆರವು ಮಾಡುವಂತೆ ಮನವಿ ನೀಡಿದಾಗ ಮಾತ್ರ ಕೆಲವು ಅಧಿಕಾರಿಗಳು ಗ್ರಾಮಕ್ಕೆ ನೆಪ ಮಾತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೋಗುತ್ತಾರೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಅಧಿಕಾರಿಗಳು ಸಹ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿದ್ದು, ಹಿರೇಗುಂಡಗಲ್ಲು ಗ್ರಾಮದಲ್ಲಿರುವ ಐತಿಹಾಸಿಕ ದೇವಾಲಯವನ್ನು ಹಾಳು ಮಾಡಲು ಹೊರಟಿದ್ದಾರೆ. ಈ ಬಗ್ಗೆ ಕೂಡಲೇ ಕಠಿಣ ಕ್ರಮವನ್ನು ಕೈಗೊಂಡು ಒತ್ತುವರಿ ತೆರವುಗೊಳಿಸಿ ಶ್ರೀ ಆಂಜನೇಯ ಸ್ವಾಮಿ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಅನುಕೂಲ ಮಾಡಿಕೊಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಕೈಗೊಳ್ಳಲಾಗುವುದೆಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಹಿರೇಗುಂಡಗಲ್ಲು ಗ್ರಾಮದಲ್ಲಿ ಐತಿಹಾಸಿಕ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ದೇವಾಲಯ ಜೀರ್ಣೋದ್ಧಾರ ಮಾಡಲು ತೊಂದರೆ ಉಂಟು ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ಮನವಿ ನೀಡಿದ್ದರು ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ
| ಹಿರೇಗುಂಡಗಲ್ಲು ಗ್ರಾಮಸ್ಥರು
Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು
ಚಿಕ್ಕನಾಯಕನಹಳ್ಳಿ: ತಾಲೂಕಿನ ಬೆಳಗುಲಿ ಹೊನ್ನಮರಡಿ ಶ್ರೀ ರಂಗನಾಥ ಸ್ವಾಮಿಯ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ (Honnamaradi Jatre) ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ನೆರವೇರಿತು.
ಶ್ರೀ ಹೊನ್ನಮರಡಿ ರಂಗನಾಥ ಸ್ವಾಮಿ ಬೆಟ್ಟದ ಮೇಲೆ ಶ್ರೀ ಉಡುಸಲಮ್ಮ ದೇವಿ ಆಗಮನದೊಂದಿಗೆ ನಡೆದ ಗಂಡುಗತ್ರಿ ಮುಳ್ಳಾವಿಗೆ ಉರುವತ್ತಿ ಮತ್ತು ದೊಡ್ಡ ಊಳಗ ಕಾರಣಿಕ, ಬಸವನ ಮೆರವಣಿಗೆಯನ್ನು ಭಕ್ತರು ಕಣ್ತುಂಬಿಕೊಂಡರು. ಜಾತ್ರೆ ಅಂಗವಾಗಿ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.