ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Leopard Captured: ತಿಪಟೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ!

Leopard Captured: ಕಳೆದ ಒಂದು ತಿಂಗಳಿಂದ ತಿಪಟೂರು ತಾಲೂಕಿನ ಗ್ರಾಮಸ್ಥರಲ್ಲಿ ಭಯಭೀತಿಗೊಳಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಂಚೆಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

ತಿಪಟೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ!

Profile Siddalinga Swamy Jul 7, 2025 5:49 PM

ತಿಪಟೂರು: ಕಳೆದ ಒಂದು ತಿಂಗಳಿಂದ ಏಳು ಹಳ್ಳಿಗಳ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ (Leopard Captured) ಘಟನೆ ತಿಪಟೂರು ತಾಲೂಕಿನ ಅಂಚೆಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯು ಅಂಚೆಕೊಪ್ಪಲು ಗ್ರಾಮದ ತೋಟದ ಸಾಲಿನಲ್ಲಿ ಬೋನನ್ನು ಇಡಲಾಗಿತ್ತು. ಆದರೆ ಸುಮಾರು ನಾಲ್ಕೈದು ದಿನ ಕಳೆದರೂ ಚಿರತೆಯ ಬೋನಿಗೆ ಬಿದ್ದಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರು ಬೊನನ್ನು ಗ್ರಾಮದೊಳಗೆ ತಂದು ಇಟ್ಟಿದ್ದರು. ಮೂರು ದಿನಗಳ ನಂತರ ಇಂದು ಬೆಳಗಿನ ಜಾವ ಚಿರತೆ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆ ನೋಡಲು ಬೆಳಗ್ಗೆಯಿಂದಲೇ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಆಗಮಿಸಿದ್ದರು. ಕಳೆದ ಒಂದು ತಿಂಗಳಿನಿಂದ ಸುತ್ತಮುತ್ತಲಿನ ಏಳು ಗ್ರಾಮಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಮೂರ್ನಾಲ್ಕು ಚಿರತೆಗಳಲ್ಲಿ ಒಂದು ಚಿರತೆ ಗ್ರಾಮಸ್ಥರ ನೆರವಿನಿಂದ ಬೋನಿಗೆ ಬಂದಿದೆ ಎಂದು ತಿಳಿದುಬಂದಿದೆ.‌

ಈ ಸುದ್ದಿಯನ್ನೂ ಓದಿ | Murder Case: ವ್ಯಕ್ತಿಯ ಅಪಹರಿಸಿ, ಖಾಸಗಿ ಅಂಗಕ್ಕೆ ಒದ್ದು ಹತ್ಯೆ; ಮಹಿಳೆ ಸೇರಿ ಮೂವರ ಬಂಧನ