ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Leopard dies: ಅರಣ್ಯ ಇಲಾಖೆ ಎಡವಟ್ಟಿನಿಂದ ಬೋನಿನಲ್ಲೇ ಬೆಂಕಿಗಾಹುತಿಯಾದ ಚಿರತೆ!

Leopard dies: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಚಿರತೆಯೇನೋ ಬೋನಿಗೆ ಬಿದ್ದಿತ್ತು. ಆದರೆ ಅದನ್ನು ಅರಣ್ಯ ಸಿಬ್ಬಂದಿ ಗಮನಿಸದ ಹಿನ್ನೆಲೆ ಬೋನಿಟ್ಟಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡು ಚಿರತೆ ಬಲಿಯಾಗಿದೆ.

ಅರಣ್ಯ ಇಲಾಖೆ ಎಡವಟ್ಟಿನಿಂದ ಬೋನಿನಲ್ಲೇ ಬೆಂಕಿಗಾಹುತಿಯಾದ ಚಿರತೆ

Profile Prabhakara R Mar 5, 2025 2:03 PM

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಎಡವಟ್ಟಿನಿಂದ ಬೋನಿನಲ್ಲೇ ಚಿರತೆ ಬೆಂಕಿಗಾಹುತಿಯಾಗಿರುವ ಹೃದಯ ವಿದ್ರಾವಕ ಘಟನೆ (Leopard dies) ನಡೆದಿದೆ. ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮದ್ಲೇಹಳ್ಳಿ ಗ್ರಾಮದ ಸರ್ವೆ ನಂಬರ್ 10ರಲ್ಲಿ ನಾರಾಯಣಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು. ಚಿರತೆಯೇನೋ ಬೋನಿಗೆ ಬಿದ್ದಿತ್ತು. ಆದರೆ, ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿನಲ್ಲಿದ್ದ ಚಿರತೆ ಹೊರಹೋಗಲಾಗದೆ ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆ ಮರಣೋತ್ತರ ಪರೀಕ್ಷೆ ನಂತರ ಚಿರತೆ ಕಳೇಬರ ವಿಲೇವಾರಿ ಮಾಡಲಾಗಿದೆ. ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಬೋನು ಇಟ್ಟಿದೆ, ಆದರೆ ಬೋನಿನಲ್ಲಿ ಚಿರತೆ ಬಿದ್ದಿರುವ ಬಗ್ಗೆ ಮಾಹಿತಿ ಕಲೆಹಾಕಲು ವಿಫಲವಾದ ಹಿನ್ನೆಲೆ ಚಿರತೆ ಸಾವು ಸಂಭವಿಸಿದೆ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Kidnap Case: ಬಂಡೀಪುರ ರೆಸಾರ್ಟ್‌ನಿಂದ ಕಿಡ್‌ನ್ಯಾಪ್‌ ಆದ ದಂಪತಿ ಪತ್ತೆ, ನಡೆದದ್ದೇನು?

ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ಕೃಷ್ಣಾನದಿಗೆ ಹಾರಿ ತಾಯಿ‌ ಆತ್ಮಹತ್ಯೆ

ರಾಯಬಾಗ: ಕೃಷ್ಣಾನದಿಗೆ ಹಾರಿ ತಾಯಿ‌ ಮಕ್ಕಳು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಘಟನೆ ನಡೆದಿದೆ. ಶಾರದಾ ಢಾಲೆ (38), ಅನುಶಾ ಢಾಲೆ (10), ಅಮೃತಾ ಢಾಲೆ (14), ಆದರ್ಶ ಢಾಲೆ (8) ಮೃತಪಟ್ಟ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ದಿನನಿತ್ಯ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂರು ಮಕ್ಕಳ ಜತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೀತಿಸಿ ಮದುವೆಯಾದ ಮೂರೇ ದಿನದಲ್ಲಿ ವರ ಹೃದಯಾಘಾತಕ್ಕೆ ಬಲಿ

ಮಂಡ್ಯ: ಇತ್ತೀಚೆಗೆ ಪೂರ್ವಹಿನ್ನೆಲೆ ಇಲ್ಲದಿದ್ದರೂ ಆಕಸ್ಮಿಕವಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ (Heart Failure) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಮಂಡ್ಯ (Mandya News) ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ | POCSO Case: ವಿದ್ಯಾರ್ಥಿನಿಯರಿಗೆ ನಿದ್ರೆ ಮಾತ್ರೆ ನೀಡಿ ರೇಪ್‌ ಎಸಗಿದ ಶಿಕ್ಷಕ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯ ಕೆಸಿ ಮಂಜುನಾಥ್ ಪುತ್ರ ಶಶಾಂಕ್ (28) ಹೀಗೆ ಸಾವನ್ನಪ್ಪಿದವರು. ಕಳೆದ ಭಾನುವಾರ ಶಶಾಂಕ್ ಹಸೆಮಣೆ ಏರಿದ್ದು, ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನಿನ್ನೆ ಹೃದಯಾಘಾತದಿಂದ ಶಶಾಂಕ್ ಸಾವನ್ನಪ್ಪಿದ್ದಾರೆ.