ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸಲಾಗುವುದು: ಮಾಜಿ ಶಾಸಕ ಪ್ರೀತಮ್ ಗೌಡ

Madhugiri News: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ಗ್ರಾ.ಪಂ.ವಾರು ರಾಜ್ಯದ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ಕಾರ್ಯಕರ್ತರಿಗೆ ಶಕ್ತಿ ತುಂಬುವುದೇ ಬಿಜೆಪಿ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ತಿಳಿಸಿದ್ದಾರೆ.

ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸಲಾಗುವುದು: ಪ್ರೀತಮ್ ಗೌಡ

ಮಧುಗಿರಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಮ್ ಗೌಡ ಮತ್ತು ಮುಖಂಡರು. -

Profile
Siddalinga Swamy Feb 13, 2026 8:07 PM

ಮಧುಗಿರಿ, ಫೆ.13: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವುದಕ್ಕೆ ಬೂತ್ ಮಟ್ಟದ ಸಭೆ ಹಾಗೂ ಸಮಾವೇಶಗಳನ್ನು ನಡೆಸುವ ಉದ್ದೇಶವನ್ನು ಬಿಜೆಪಿ ಪಕ್ಷ ಹೊಂದಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ತಿಳಿಸಿದರು. ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲಾ ಕಚೇರಿಯಲ್ಲಿ (Madhugiri News) ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ಗ್ರಾ.ಪಂ.ವಾರು ರಾಜ್ಯದ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಕಾರ್ಯಕರ್ತರಿಗೆ ಶಕ್ತಿ ತುಂಬುವುದೇ ಬಿಜೆಪಿ ಪಕ್ಷದ ಮುಖ್ಯ ಗುರಿಯಾಗಿದೆ ಎಂದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ವಿಚಾರ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲಾ ಘಟಕದ ಅಧ್ಯಕ್ಷ ಚಿದಾನಂದ ಗೌಡ ಮಾತನಾಡಿ, ಮಧುಗಿರಿ, ಶಿರಾ, ಕೊರಟಗೆರೆ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದಿಂದ ಬಿಜೆಪಿ ಪಕ್ಷವನ್ನು ಬಲಪಡಿಸಲು ಈಗಾಗಲೇ ಸಭೆಗಳನ್ನು ಮಾಡಲಾಗುತ್ತಿದೆ ಎಂದರು. ಪಕ್ಷ ಸಂಘಟನೆಯಾದಾಗ ಮಾತ್ರ ಜಿಲ್ಲಾ ಪಂಚಾಯತಿ ಹಾಗೂ ಗ್ರಾ.ಪಂ. ಚುನಾವಣೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.‌

ಗೃಹಲಕ್ಷ್ಮಿಯಡಿ 2 ಸಾವಿರ ಕೊಟ್ಟು ಹೆಂಡದ ಮೂಲಕ 10 ಸಾವಿರ ಕಿತ್ತುಕೊಳ್ಳುವ ಸರ್ಕಾರ: ವಿಜಯೇಂದ್ರ ಕಿಡಿ

ಈ ಸಂದರ್ಭದಲ್ಲಿ ನಿವೃತ್ತ ಕೆ.ಎ.ಎಸ್ ಅಧಿಕಾರಿ ಅನಿಲ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾವಗಡ ರವಿ, ತಾಲೂಕು ಮಂಡಳ ಅಧ್ಯಕ್ಷ ಹನುಮಂತರೆಡ್ಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಆರ್. ರಮೇಶ್, ಮೋಹನ್ ರಾಜ್, ಮೂರ್ತಿ ಯಂಜಲಗೆರೆ, ಜಿಲ್ಲಾ ಉಪಾಧ್ಯಕ್ಷ ಚಿಕ್ಕಣ್ಣ ಹಾಗೂ ಬಿಜೆಪಿ ಮುಖಂಡರುಗಳಾದ ಅರುಣ್, ಪ್ರತಾಪ್ ಹಾಜರಿದ್ದರು.