ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Madhugiri News: ಕುಡಿಯುವ ನೀರು ಪೂರೈಕೆಗೆ ಆಗ್ರಹ: ಚೀಲನಹಳ್ಳಿ ಗ್ರಾಮಸ್ಥರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Madhugiri News: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ, ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೀಲನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕುಡಿಯುವ ನೀರು ಪೂರೈಕೆಗೆ ಆಗ್ರಹ: ಚೀಲನಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

-

Profile
Siddalinga Swamy Nov 20, 2026 7:58 PM

ಮಧುಗಿರಿ, ನ.20: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀಲನಹಳ್ಳಿ ಗ್ರಾಮದಲ್ಲಿ (Madhugiri News) ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀಲನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ದಿಢೀರ್ ಚೀಲನಹಳ್ಳಿ ಮತ್ತು ಹೊಸಕೆರೆ ಹೋಗುವ ಮುಖ್ಯ ರಸ್ತೆಯಲ್ಲಿ ಕುಳಿತು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದರು.

ಕಳೆದ ಹಲವು ದಿನಗಳಿಂದ ನೀರಿಲ್ಲದ ಕಾರಣ ಗ್ರಾಮಸ್ಥರು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ನೀರು ಪೂರೈಕೆಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ಗ್ರಾಮಸ್ಥರು ಜಮಾವಣೆಗೊಂಡು ವಾಹನಗಳನ್ನ ಬಿಡದೇ ಪ್ರತಿಭಟಿಸುತ್ತಿದ್ದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಿಡಿಗೇಶಿ ಪಿಎಸ್ಐ ರವೀಂದ್ರ ಪಿ.ಎಲ್. ಅವರು ಸಮಾಧಾನ ಪಡಿಸಿ ಗ್ರಾಮಸ್ಥರ ಮನವಲಿಸಿದಾಗ ಪ್ರತಿಭಟನೆ ಹಿಂಪಡೆದರು.