ಮಧುಗಿರಿ: ತುಮಕೂರು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮಧುಗಿರಿ (Madhugiri News) ತಾಲೂಕಿನ ಐ.ಡಿ. ಹಳ್ಳಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ನಳಿನಾ ಭಾಗವಹಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ಸಂದರ್ಭದಲ್ಲಿ ಮಾತನಾಡಿದ ಐ.ಡಿ.ಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ವಿ. ಸುರೇಂದ್ರ ಕುಮಾರ್, ವಿದ್ಯಾರ್ಥಿನಿ ನಳಿನಾಗೆ ಪ್ರೋತ್ಸಾಹ ನೀಡಿದ ಕಾಲೇಜಿನ ಉಪನ್ಯಾಸಕಿ ರೂಪ ಅವರಿಗೆ ಅಭಿನಂದಿಸಿದರು. ಗ್ರಾಮೀಣ ಭಾಗದವರು ಕ್ರೀಡೆ ಜತೆಗೆ ಉನ್ನತ ವ್ಯಾಸಂಗದ ಕಡೆಗೆ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಯುವ ಸಂಸತ್ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ನಳಿನಾಗೆ ಕಾಲೇಜಿನ ಪ್ರಾಂಶುಪಾಲ ಶಂಭುಲಿಂಗೇಶ, ಉಪನ್ಯಾಸಕರು, ಸಿಬ್ಬಂದಿ ವರ್ಗ, ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | IBPS Recruitment 2025: ಬ್ಯಾಂಕ್ ಉದ್ಯೋಗಾರ್ಥಿಗಳಿಗೆ ಸಿಹಿ ಸುದ್ದಿ; ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS