Madhugiri News: ಠಾಣೆಯಲ್ಲೇ ಮಹಿಳೆ ಜತೆ ಚಕ್ಕಂದ; ಮಧುಗಿರಿ ಡಿವೈಎಸ್ಪಿ ಅರೆಸ್ಟ್
Madhugiri News: ಮಧುಗಿರಿ ಪೊಲೀಸರು ಡಿವೈಎಸ್ಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಮಧುಗಿರಿ: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಡಿವೈಎಸ್ಪಿ ರಾಮಚಂದ್ರಪ್ಪನನ್ನು ಮಧುಗಿರಿ ಪೊಲೀಸರು (Madhugiri News) ಬಂಧಿಸಿದ್ದಾರೆ. ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದ ಡಿವೈಎಸ್ಪಿ ವಿರುದ್ಧ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಿಕೊಂಡಿದ್ದ ಮಧುಗಿರಿ ಪೊಲೀಸರು ಡಿವೈಎಸ್ಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತು
ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ (DySP suspended) ಸಂಬಂಧ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಈಗಾಗಲೇ ಅಮಾನತುಗೊಂಡಿದ್ದಾರೆ. ಜಮೀನು ವ್ಯಾಜ್ಯ ಸಂಬಂಧ ಪಾವಗಡ ಮೂಲದ ಮಹಿಳೆ ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದಿದ್ದಾಗ, ಆಕೆಯನ್ನು ಪುಸಲಾಯಿಸಿ ಠಾಣೆಯ ಶೌಚಗೃಹದಲ್ಲಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಅಮಾನತುಗೊಂಡಿದ್ದಾರೆ.
ಡಿವೈಎಸ್‌ಪಿ ರಾಸಲೀಲೆಯನ್ನು ಕೆಲವರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಕೆಆರ್‌ಎಸ್ ಪಕ್ಷದ ಮುಖಂಡರು, ಬಿಜೆಪಿ ಕಾರ್ಯಕರ್ತರು ಹಾಗೂ ದಲಿತ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಡಿವೈಎಸ್‌ಪಿಯನ್ನು ಅಮಾನತು ಮಾಡುವುದು ಮಾತ್ರವಲ್ಲದೆ, ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಅಮಾನತಿಗೆ ಡಿಜಿ-ಐಜಿಪಿ ಆದೇಶಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರು ಡಿವೈಎಸ್‌ಪಿ ರಾಮಚಂದ್ರಪ್ಪರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ ವರದಿ ಆಧರಿಸಿ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಹಾಗೂ ವಿಡಿಯೊ ಸಾಕ್ಷಿಯನ್ನು ಆಧರಿಸಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಏನಿದು ಪ್ರಕರಣ?ಜಮೀನು ತಗಾದೆ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಠಾಣೆಗೆ ಬಂದ ಮಹಿಳೆಯನ್ನು ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ, ಕಚೇರಿಯ ಶೌಚಾಲಯಕ್ಕೆ ಕರೆದುಕೊಂಡುಹೋಗಿ ತನ್ನ ಕಾಮತೃಷೆ ತೀರಿಸಲು ಬಲವಂತಪಡಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಸನ್ನಿವೇಶದಲ್ಲಿ ಅದನ್ನು ಠಾಣೆಯಲ್ಲಿದ್ದ ಸಾರ್ವಜನಿಕರೊಬ್ಬರು ಶೌಚಾಲಯದ ಗೋಡೆಯ ಈಚೆಯಿಂದ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದರು.
ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ತುಮಕೂರಿನ ಎಲ್ಲೆಡೆ ಹರಿದಾಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಶಿಸ್ತುಕ್ರಮ ಕೈಗೊಂಡಿದೆ. ಈ ನಡುವೆ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಕುರಿತು ವಿಚಾರಿಸಲು ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಜೊತೆ ಡಿವೈಎಸ್‌ಪಿ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಹೀಗಾಗಿ ಡಿವೈಎಸ್‌ಪಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಸುದ್ದಿಯನ್ನೂ ಓದಿ | Police Harassment: ಠಾಣೆಗೆ ಬಂದ ಮಹಿಳೆ ಮೇಲೆ ಡಿವೈಎಸ್‌ಪಿ ಲೈಂಗಿಕ ವಿಕೃತಿ, ವಿಡಿಯೋ ವೈರಲ್