ಮಧುಗಿರಿ, ಜು.29: ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯ ಅಡಿಯಲ್ಲಿ ಮಧುಗಿರಿ (Madhugiri News) ಪೊಲೀಸ್ ಉಪವಿಭಾಗ ಮತ್ತು ವೃತ್ತ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ "ರೈಸ್ (RISE) - ಬೇಡ ಬ್ರೋ" ಡ್ರಗ್ಸ್ ಮುಕ್ತ ಕರ್ನಾಟಕ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಕರ್ನಾಟಕವನ್ನು 2028ರೊಳಗೆ ಸಂಪೂರ್ಣವಾಗಿ ಮಾದಕ ದ್ರವ್ಯ ಹಾಗೂ ವ್ಯಸನ ಮುಕ್ತ ರಾಜ್ಯವನ್ನಾಗಿ ರೂಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು 'ಬೇಡ ಬ್ರೋ' ಹಾಗೂ 'ಆಪರೇಷನ್ ರೈಸ್ (RISE)' ವಿಶೇಷ ಅಭಿಯಾನಗಳನ್ನು ಆರಂಭಿಸಿದೆ. ಈ ಅಭಿಯಾನದ ಮೂಲಕ ಮಧುಗಿರಿ ವಿಧಾನಸಭಾ ಕ್ಷೇತ್ರವನ್ನು ನಶೆಮುಕ್ತ ಕ್ಷೇತ್ರವನ್ನಾಗಿ ರೂಪಿಸಿ, ಯುವಜನತೆಯನ್ನು ಮಾದಕ ವ್ಯಸನದಿಂದ ರಕ್ಷಿಸಲು ಅಗತ್ಯವಾದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ; ಜುಲೈ ತಿಂಗಳಲ್ಲಿ ಕರೆಂಟ್ ಬಿಲ್ ಬರೋದಿಲ್ಲ
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿ.ವೈ.ಎಸ್.ಪಿ. ಮಂಜುನಾಥ್, ತಹಸೀಲ್ದಾರ್ ಎಸ್. ಎ. ನಂದಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ, ಸಿ.ಪಿ.ಐ. ಹನುಮಂತರಾಯಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ , ಪಿ.ಎಸ್.ಐ.ಗಳಾದ ಚಂದ್ರಶೇಖರ್, ರವೀಂದ್ರ ಹಾಗೂ ರಾಜೇಶ್, ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಧರಣೇಶ್ ಗೌಡ, ಮುಖಂಡ ಹರ್ಷ ಆರ್. ಕುರುಬರಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.