ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಮಧುಗಿರಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸುದ್ದಿಗೋಷ್ಟಿ ನಡೆಯಿತು.

ಮಧುಗಿರಿ, ಜೂ. 18: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮಧುಗಿರಿ ಪಟ್ಟಣದ (Madhugiri News) ಸರ್ಕಾರಿ ನೌಕರರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿದರು.

ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಾಲಯ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ ʼಸಿದ್ದಶ್ರೀ ಪ್ರಶಸ್ತಿʼ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ

ಶ್ರೀಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಸಚಿವರಿಗೆ ಆಹ್ವಾನ

ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್‌, ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ವಿ. ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಸೇರಿ ಹಲವು ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರ ಸಹಕಾರದಿಂದ ಮುಂದಿನ ದಿನಗಳಲ್ಲಿ ಪುಣ್ಯಕ್ಷೇತ್ರದ ಆಧಿಪತಿ ಶ್ರೀಸಿದ್ದೇಶ್ವರ ಸ್ವಾಮಿಗೆ ಪ್ರಿಯವಾದ ಹೋಳಿಗೆ ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.‌

Astro Tips: ಪೂಜೆಯಲ್ಲಿ ತೆಂಗಿನಕಾಯಿ ಅರ್ಪಿಸುವುದಕ್ಕೂ ಇದೆ ನಿಯಮ; ಯಾವ ದೇವರಿಗೆ ಹೇಗೆ ಸಮರ್ಪಿಸಬೇಕು?; ಇಲ್ಲಿದೆ ಮಾಹಿತಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಎಂ.ಜಿ. ಶ್ರೀನಿವಾಸ್ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಮಾಜಿ ಸದಸ್ಯ ಕೆ. ನಾರಾಯಣ್, ನಾಯಕ ಸಂಘದ ತಾಲೂಕು ಅಧ್ಯಕ್ಷ ಮೌಂಟ್ ವ್ಯೂ ಜಗದೀಶ್, ಶಂಕರ ಸೇವಾ ಸಮಿತಿಯ ಅಧ್ಯಕ್ಷ ಬಿ. ಸತ್ಯನಾರಾಯಣ, ಮುಖಂಡರಾದ ಬಿ.ಎಚ್. ಪಂಚಾಕ್ಷರಯ್ಯ, ಕೆ.ವಿ. ಮಂಜುನಾಥ ಗುಪ್ತ, ಎಂ. ವೆಂಕಟರಾಮ, ನಂಜಮ್ಮ, ಫರ್ನಿಚರ್ ಮಂಜುನಾಥ್, ಮೂಡ್ಲಗೀರಿಶ್, ಮಧು ಮಲ್ಲಘಟ್ಟ, ದ್ವಾರಕನಾಥ್, ಪಿ.ಎಂ. ಸಿದ್ದಪ್ಪ, ನಾಗರಾಜು, ಕಿಶೋರ್ ಶೆಟ್ಟಿ ಉಪಸ್ಥಿತರಿದ್ದರು.