ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಕೆ.ಎನ್. ರಾಜಣ್ಣ ಸೂಚನೆ

Madhugiri News: ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರೂ ಹಾಗೂ ಶಾಸಕ ಕೆ.ಎನ್. ರಾಜಣ್ಣ ಸೂಚನೆ ನೀಡಿದ್ದಾರೆ.

ತಾಲೂಕು ಮಟ್ಟದ ಕುಡಿಯುವ ನೀರಿನ ವ್ಯವಸ್ಥೆ ಕುರಿತ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ಮಾತನಾಡಿದರು.

ಮಧುಗಿರಿ, ಜು.22: ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರೂ ಹಾಗೂ ಶಾಸಕ ಕೆ. ಎನ್. ರಾಜಣ್ಣ ಸೂಚನೆ ನೀಡಿದರು. ಪಟ್ಟಣದ (Madhugiri News) ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕುಡಿಯುವ ನೀರಿನ ವ್ಯವಸ್ಥೆ ಕುರಿತ ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಹಲವು ಮಹತ್ವದ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಕುಡಿಯುವ ನೀರಿನ ಸರಬರಾಜಿನ ಕುರಿತು ಮಾಹಿತಿ ಪಡೆದು, ತೊಂದರೆ ಇರುವ ಪ್ರದೇಶಗಳಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. ಅಲ್ಲದೆ, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ವಾಟರ್‌ಮನ್‌ಗಳು ಸಮಯಕ್ಕೆ ಸರಿಯಾಗಿ ನೀರು ಪೂರೈಸುವಂತೆ ತಿಳಿಸಿದರು.

ಬರಗಾಲದ ಪರಿಸ್ಥಿತಿ ಎದುರಾಗುವ ಮುನ್ನವೇ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ, ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಗ್ರಾಮ ಪಂಚಾಯಿತಿಗಳ ಬೋರ್‌ವೆಲ್‌ಗಳ ಸುತ್ತಮುತ್ತ ಗಿಡ-ಗಂಟೆಗಳು ಬೆಳೆಯದಂತೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಹಾಗೂ ಬೋರ್‌ವೆಲ್‌ಗಳಿಗೆ ತುಕ್ಕು ಹಿಡಿಯದಂತೆ ಬಣ್ಣ ಬಳಿಯುವಂತೆ ಸಲಹೆ ನೀಡಿದರು.

ಅಗತ್ಯವಿದ್ದಲ್ಲಿ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳುವಂತೆ, ರೈತರಿಗೆ ಮೇವಿನ ಬೀಜಗಳ ಕೊರತೆಯಾಗದಂತೆ ನೋಡಿಕೊಳ್ಳುವುದು ಹಾಗೂ ಅವುಗಳನ್ನು ಆದಷ್ಟು ಬೇಗ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲೂಕಿನಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.‌

ನವಜಾತ ಶಿಶುವಿಗೆ ಮರುಜೀವ; ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ವೈದ್ಯರ ಸಾಧನೆ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ , ತಹಸೀಲ್ದಾರ್ ನಂದಿನಿ ಎಸ್.ಎ., ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ, ಎ.ಇ.ಇ. ಕಾಂತರಾಜು, ತಾಪಂ ಎ.ಡಿ. ಧನಂಜಯ್, ಡಿ.ವೈ.ಎಸ್.ಪಿ. ಮಂಜುನಾಥ್ ಸೇರಿದಂತೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.