ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆಯಿಂದ ಕಿರಿಕಿರಿ: ಸಾರ್ವಜನಿಕರ ಆಕ್ರೋಶ

Madhugiri News: ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿರುವುದರಿಂದ ವೃದ್ಧರು ಹಾಗೂ ಮಹಿಳೆಯರು ಕಚೇರಿಗೆ ತೆರಳಲು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ವಾಹನ ನಿಲುಗಡೆಯಿಂದ ಕಿರಿಕಿರಿ

ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವುದು. -

Profile
Siddalinga Swamy Jan 20, 2026 8:55 PM

ಮಧುಗಿರಿ, ಜ.20: ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ (Madhugiri News) ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ವೃದ್ಧರು ಹಾಗೂ ಮಹಿಳೆಯರು ಕಚೇರಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ವಾಹನಗಳ ವ್ಯವಸ್ಥಿತವಾಗಿ ನಿಲುಗಡೆ ಮಾಡದೇ ಇರುವುದರಿಂದ ಕಚೇರಿಯ ಒಳಗಡೆ ತೆರಳಲು ಸ್ಥಳಾವಕಾಶವೇ ಇಲ್ಲದಂತಾಗಿದ್ದು, ಇದರಿಂದ ಕಚೇರಿ ಆವರಣ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ವಾಹನಗಳನ್ನು ಕ್ರಮಬದ್ಧವಾಗಿ ನಿಲುಗಡೆ ಮಾಡಿದ್ದಲ್ಲಿ ಯಾವುದೇ ಸಮಸ್ಯೆಯಿಲ್ಲ, ಆದರೆ ಕೆಲವರು ದಾರಿಯಲ್ಲೇ ‌ದ್ವಿಚಕ್ರ, ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಕಚೇರಿಯ ಒಳಗಡೆ ತೆರಳಲು ತೊಂದರೆ ಅನುಭವಿಸುವಂತಾಗಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.‌

Madhugiri News: ತಿಮ್ಲಾಪುರ ಅಭಯಾರಣ್ಯದಲ್ಲಿ ಬೆಂಕಿ ನಂದಿಸುವ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

ಈ ಅವ್ಯವಸ್ಥೆಯಿಂದ ಕಚೇರಿಗೆ ಆಗಮಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಬೇಕು ಎಂದು ತಾಲೂಕು ತಹಸೀಲ್ದಾರ್ ಎಚ್. ಶ್ರೀನಿವಾಸ್ ಅವರನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.