ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Pavagada Naxalites: ಪಾವಗಡದಲ್ಲಿ ನಕ್ಸಲ್ ಭೀತಿ; ಶಂಕಿತ ನಕ್ಸಲ್ ವೆಂಕಟೇಶ್‌ಗಾಗಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆ

ಪಾವಗಡದಲ್ಲಿ ತಾಲೂಕಿನಲ್ಲಿ ಶಂಕಿತ ವೆಂಕಟೇಶ್‌ನ ಜಾಡು ಪತ್ತೆಹಚ್ಚಲು ಪೊಲೀಸರು ಅತ್ಯಾಧುನಿಕ ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇಟ್ಟಿದ್ದಾರೆ. ಗ್ರಾಮಗಳು, ಗುಡ್ಡಗಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶಂಕಿತನ ಬಂಧನಕ್ಕಾಗಿ ಪೊಲೀಸ್ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ.

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಕ್ಸಲ್‌ ಭೀತಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಶಂಕಿತ ನಕ್ಸಲ್ ಕನಿಕಲಬಂಡೆಯ ಉಪ್ಪಾರ್ ವೆಂಕಟೇಶ್ ಬಂಧನಕ್ಕೆ ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿದೆ. ಕನಿಕಲಬಂಡೆ ಸುತ್ತಮುತ್ತ ವೆಂಕಟೇಶ್ ಆಗಾಗ್ಗೆ ಗ್ರಾಮಸ್ಥರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಒಟ್ಟು ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಡಿವೈಎಸ್ಪಿ, ಐವರು ಇನ್ಸ್‌ಪೆಕ್ಟರ್‌ಗಳು ಹಾಗೂ 10 ಮಂದಿ ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಕನಕಲಬೆಂಡೆ ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪೊಲೀಸರು ಬಿರುಸಿನ ಶೋಧ ನಡೆಸಿದ್ದಾರೆ.

ವೆಂಕಟೇಶ್‌ನ ಜಾಡು ಪತ್ತೆಹಚ್ಚಲು ಪೊಲೀಸರು ಅತ್ಯಾಧುನಿಕ ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇಟ್ಟಿದ್ದಾರೆ. ಗ್ರಾಮಗಳು, ಗುಡ್ಡಗಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶಂಕಿತನ ಬಂಧನಕ್ಕಾಗಿ ಪೊಲೀಸ್ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ.

ಉಗ್ರಗಾಮಿ ಚಟುವಟಿಕೆಗೆ ನೆರವು: ಭಯೋತ್ಪಾದಕ ಹಫೀಜ್ ಸಯೀದ್ ಗೆ ಜಾಮೀನು ರಹಿತ ವಾರಂಟ್ ಜಾರಿ

ನಕ್ಸಲ್ ಶಂಕಿತನ ಓಡಾಟದ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ತಂಡಗಳ ನಿರಂತರ ಕಾರ್ಯಾಚರಣೆಯಿಂದ ಭದ್ರತೆ ಹೆಚ್ಚಿಸಲಾಗಿದೆ .