ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಿಡಿಗೇಡಿಗಳ ಅಟ್ಟಹಾಸ; ಹೊಳವನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಕಿಟಕಿ ಗಾಜುಗಳು ಪುಡಿಪುಡಿ!

Koratagere News: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‌ಗಳಿಗೆ ಯಾರೋ ದುಷ್ಕರ್ಮಿಗಳು ತಡರಾತ್ರಿ ಕಲ್ಲು ತೂರಾಟ ಮಾಡಿದ್ದು, ನಾಲ್ಕು ಸಿಸಿ ಕ್ಯಾಮೆರಾಗಳು ಹಾಗೂ ಕೊಠಡಿಯ ಕಿಟಕಿಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಜರುಗಿದೆ.

ಕೊರಟಗೆರೆ, ಸೆ.21: ತಾಲೂಕಿನ ಹೊಳವನಹಳ್ಳಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‌ಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ತಾಲೂಕಿನ (Koratagere News) ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಅತಿ ದೊಡ್ಡ ಶಾಲೆಯ ಹೊಸ ಕಟ್ಟಡದ ಕಿಟಕಿ ಗ್ಲಾಸ್‌ಗಳಿಗೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದು, ನಾಲ್ಕು ಸಿಸಿ ಕ್ಯಾಮೆರಾಗಳು, ಶಾಲೆಯ ಕೊಠಡಿಯ ಕಿಟಕಿಯ ಗಾಜುಗಳು ಪುಡಿಪುಡಿಯಾಗಿವೆ.

ಶಾಲೆಯ ಹೊಸ ಕಟ್ಟಡದ ಕಿಟಕಿಗಳಿಗೆ ಕಲ್ಲುತೂರಾಟ ನಡೆಸಿರುವ ಕಾರಣ, ಗಾಜಿನ ಚೂರುಗಳು ತರಗತಿ ಕೊಠಡಿಗಳೊಳಗೆ ಬಿದ್ದಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 3, 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳನ್ನು ಹೊರಗೆ ಕೂರಿಸಿ ಶಿಕ್ಷಕರು ಪಾಠ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.

Koratagere News

ಈ ಕುರಿತು ಬಿಇಒ ಫೈರೋಜಾ ಬೇಗಂ ಮಾತನಾಡಿ ಹೊಳವನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಶಾಲೆಯ ಹೊಸ ಕಟ್ಟಡದ ಕಿಟಕಿ ಗ್ಲಾಸ್‌ಗಳು ಪುಡಿಪುಡಿಯಾಗಿದ್ದು, ಗಾಜಿನ ಚೂರುಗಳು ತರಗತಿ ಕೊಠಡಿಗಳೊಳಗೆ ಬಿದ್ದಿವೆ. ಇದರ ಜತೆಗೆ ಶಾಲೆಯಲ್ಲಿ ಅಳವಡಿಸಲಾಗಿದ್ದ ನಾಲ್ಕು ಸಿಸಿ ಕ್ಯಾಮೆರಾಗಳಿಗೂ ಕಲ್ಲು ತೂರಲಾಗಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಪೊಲೀಸ್ ಠಾಣೆಗೆ ದೂರು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.‌

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್

ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಶಾಲೆಯ ಗ್ಲಾಸ್‌ಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಆಗ್ರಹಿಸಿದ್ದಾರೆ.