ಮಧುಗಿರಿ, ಆ.07: ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಕೆ.ಎನ್.ರಾಜಣ್ಣ (KN Rajanna) ಅವರ ನೇತೃತ್ವದಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಈ ವೇಳೆ ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಅನುಷ್ಠಾನದ ವೇಗ ಹಾಗೂ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಶಾಸಕರು ಸಮಗ್ರ ಮಾಹಿತಿ ಪಡೆದರು.
ಅನುಷ್ಠಾನ ಇಲಾಖೆಗಳ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಹಾಗೂ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನದ ಕುರಿತು ಚರ್ಚಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಗ್ರಾಮೀಣ ಪ್ರದೇಶಗಳ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅಗತ್ಯತೆಗಳನ್ನು ಆಧರಿಸಿ ಅಂತರ್ಜಲ ಹಾಗೂ ಮೂಲ ಸೌಕರ್ಯಗಳ ಆದ್ಯತೆಯ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಮಾಹಿತಿ ಪಡೆದರು.

ಎಂಜಿನಿಯರ್‌ಗಳೊಂದಿಗೆ ಕಾಮಗಾರಿಗಳ ತಾಂತ್ರಿಕ ಗುಣಮಟ್ಟ, ಸ್ಥಳ ಪರಿಶೀಲನೆ ಹಾಗೂ ನಿರ್ಮಾಣದ ಪ್ರಗತಿ ಕುರಿತು ಚರ್ಚಿಸಿ, ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ
ಜನರ ಅಗತ್ಯಗಳಿಗೆ ಸ್ಪಂದಿಸುವ, ಗುಣಮಟ್ಟದ ಹಾಗೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು.