ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಧುಗಿರಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನ - 2026 ಜಾಥಾ; ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ

Madhugiri News: ಮಧುಗಿರಿ ಪಟ್ಟಣದಲ್ಲಿರುವ ಪಿಎಂ ಶ್ರೀ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು, ಮಧುಗಿರಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ - 2026 ಜಾಥಾ ಕಾರ್ಯಕ್ರಮ ಜರುಗಿತು.

ಮಧುಗಿರಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನ- 2026 ಜಾಥಾ

-

Profile
Siddalinga Swamy Nov 14, 2026 4:00 PM

ಮಧುಗಿರಿ, ನ.14: ಪಟ್ಟಣದಲ್ಲಿರುವ ಪಿಎಂ ಶ್ರೀ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು, ಮಧುಗಿರಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ - 2026 ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಜಾಥಾ ಕಾರ್ಯಕ್ರಮಕ್ಕೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸುಮಂಗಲ ಎಸ್ ಬಸವಣ್ಣೂ‌ರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಧಿಕ ಸಿವಿಲ್ ನ್ಯಾಯಾಧೀಶೆ ರೋಹಿಣಿ ಜೆ., ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಂ.ಶಿವಣ್ಣ, ಉಪಾಧ್ಯಕ್ಷ ಅಶ್ವತನಾರಾಯಣ, ಕಾರ್ಯದರ್ಶಿ ನರಸೇಗೌಡ, ತಾಲೂಕು ಆರೋಗ್ಯಾಧಿಕಾರಿ ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎ. ನರಸಿಂಹಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ಬಿಆರ್‌ಸಿ ಪವನ್ ಕುಮಾರ್ ರೆಡ್ಡಿ ಹಾಗೂ ಇತರರು ಹಾಜರಿದ್ದರು.