ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಲವತ್ತ ಗ್ರಾಪಂ ಉಪಾಧ್ಯಕ್ಷರಾಗಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆ

ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಸಂಸದ ವಿ.ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ಉಪಾಧ್ಯಕ್ಷರಾಗಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆ

Profile Ashok Nayak Jul 8, 2025 8:25 PM

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಬೆಲವತ್ತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಂದಿಹಳ್ಳಿ ಎನ್.ಬಿ.ರಾಜಶೇಖರ್(ವಾಜಪೇಯಿ) ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರು ಪ್ರಸಾದ್ ನಡೆಸಿಕೊಟ್ಟರು. ಸಾಮಾನ್ಯ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಆನಂದ್ ರಾಜೀನಾಮೆ ಸಲ್ಲಿಸಿದ್ದ ಹಿನ್ನಲೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗಿ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಜಶೇಖರ್ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇದನ್ನೂ ಓದಿ: Tumkur (Gubbi) News: ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ

ನೂತನ ಉಪಾಧ್ಯಕ್ಷ ಎನ್.ಬಿ.ರಾಜಶೇಖರ್ ಮಾತನಾಡಿ ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸವಲತ್ತುಗಳಾದ ನೀರು, ರಸ್ತೆ, ಚರಂಡಿ, ವಿದ್ಯುತ್ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಕೆಲಸ ಮಾಡುತ್ತೇನೆ. ಸಂಸದ ವಿ.ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಪಂಚಾಯಿತಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಸಹ ಜನಪ್ರತಿನಿಧಿಗಳ ಮೂಲಕ ತಂದು ಅಭಿವೃದ್ದಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಲತಾ ದಯಾನಂದ್ ಮಾತನಾಡಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿಸುವ ಕೆಲಸ ಎಲ್ಲಾ ಸದಸ್ಯರ ಜೊತೆ ಸೇರಿ ನಡೆಸುತ್ತೇವೆ. ಅಭಿವೃದ್ದಿ ಕೆಲಸಗಳಿಗೆ ಪಕ್ಷಾತೀತ ನಿಲುವು ತಾಳಿ ಎಲ್ಲಾ ಜನ ಪ್ರತಿನಿಧಿಗಳ ಭೇಟಿ ಮಾಡಿ ಸವಲತ್ತು ತರುವ ಕೆಲಸ ಮಾಡುತ್ತೇವೆ. ಮೈಸೂರು ರಸ್ತೆಯ ನಮ್ಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮವನ್ನು ಏಕರೂಪದಲ್ಲಿ ಅಭಿವೃದ್ದಿ ಪಡಿಸಲು ಉಳಿದ ನಾಲ್ಕೈದು ತಿಂಗಳು ನಿರಂತರ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ನೂತನ ಉಪಾಧ್ಯಕ್ಷ ರಾಜಶೇಖರ್ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ವಸಂತಕುಮಾರ್, ಮುಖಂಡರಾದ ಮಂಡಿ ಬಾಬಣ್ಣ, ರಾಮೇಗೌಡ, ಭೀಮೇಶ್, ವಕೀಲ ರಮೇಶ್, ದಯಾನಂದ್ ಸೇರಿದಂತೆ ಎಲ್ಲಾ ಗ್ರಾಪಂ ಸದಸ್ಯರು, ಪಿಡಿಓ ಸಿದ್ದರಾಜು, ಪಂಚಾಯಿತಿ ಸಿಬ್ಬಂದಿಗಳು ಇತರರು ಇದ್ದರು.