Chikkanayakanahalli News: ಶಿಕ್ಷಣದಿಂದ ಯಾರೂ ವಂಚಿತರಾಗಬಾರದು: ಸಿಎಸ್ ಕಾಂತರಾಜು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ, ಸಮುದಾಯ ಅಭಿ ವೃದ್ಧಿ ಹಾಗೂ ಆರ್ಥಿಕ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೂ ಒತ್ತು ನೀಡುತ್ತಿರುವುದು ಹೆಮ್ಮೆಯ ಸಂಗತಿ. ತಾಲೂಕಿನ 926 ವಿದ್ಯಾರ್ಥಿಗಳಿಗೆ ಒಂದು ಕೋಟಿಗೂ ಅಧಿಕ ಶಿಷ್ಯವೇತನ ನೀಡಿರುವುದು ಅದ್ಭುತ ಸಾಧನೆ ಎಂದು ಕೊಂಡಾಡಿದರು.

-

ಚಿಕ್ಕನಾಯಕನಹಳ್ಳಿ: ಶಿಕ್ಷಣ ಇಲಾಖೆಯ ಮುಖ್ಯ ಉದ್ದೇಶ ಯಾರೊಬ್ಬರೂ ಶಿಕ್ಷಣದಿಂದ ವಂಚಿತ ರಾಗಬಾರದು ಎಂಬುದಾಗಿದೆ. ಈ ಉದ್ದೇಶಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯು ಕೈಜೋಡಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಸ್ ಕಾಂತರಾಜು ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿಯಲ್ಲಿ ನಡೆದ 'ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ'ದಲ್ಲಿ ವಿದ್ಯಾರ್ಥಿಗಳಿಗೆ ಪತ್ರ ವಿತರಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ, ಸಮುದಾಯ ಅಭಿವೃದ್ಧಿ ಹಾಗೂ ಆರ್ಥಿಕ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೂ ಒತ್ತು ನೀಡುತ್ತಿರುವುದು ಹೆಮ್ಮೆಯ ಸಂಗತಿ. ತಾಲೂಕಿನ 926 ವಿದ್ಯಾರ್ಥಿಗಳಿಗೆ ಒಂದು ಕೋಟಿಗೂ ಅಧಿಕ ಶಿಷ್ಯವೇತನ ನೀಡಿರುವುದು ಅದ್ಭುತ ಸಾಧನೆ ಎಂದು ಕೊಂಡಾಡಿದರು.
ಇದನ್ನೂ ಓದಿ: Chikkanayakanahalli News: ಮನೆ ಬಾಗಿಲಿಗೆ-ಮನೆ ಮಗ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಲಿ
ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ ಶಿಷ್ಯವೇತನ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗಿದ್ದು, ಉತ್ತಮ ಪ್ರಜೆಗಳಾಗಬೇಕು ಎಂದು ಹಾರೈಸಿದರು. ಇನ್ನೊಬ್ಬ ಸದಸ್ಯರಾದ ಅವರು, ಈ ಶಿಷ್ಯವೇತನ ಪಡೆಯುವುದು ಹೆಮ್ಮೆಯ ವಿಷಯವಾಗಿದ್ದು, ಇತರರಿಗೂ ಇದು ಸ್ಫೂರ್ತಿಯಾಗಲಿ ಎಂದರು.
ಯೋಜನಾಧಿಕಾರಿ ಪ್ರೇಮಾನಂದ ಅವರು ಸಂಸ್ಥೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ, ತಮ್ಮ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 1,710 ಸ್ವಸಹಾಯ ಸಂಘಗಳು ಹಾಗೂ 14,416 ಸದಸ್ಯ ರಿದ್ದಾರೆ ಎಂದು ತಿಳಿಸಿದರು. ಪ್ರಸಕ್ತ ವರ್ಷ 160 ವಿದ್ಯಾರ್ಥಿಗಳಿಗೆ 'ಸುಜ್ಞಾನನಿಧಿ' ಶಿಷ್ಯವೇತನ ಮಂಜೂರಾಗಿದ್ದು, ಪ್ರತಿ ತಿಂಗಳು 286 ವಿದ್ಯಾರ್ಥಿಗಳಿಗೆ ₹400 ರಿಂದ ₹1000 ವರೆಗೆ ಶಿಷ್ಯವೇತನವು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದೆ ಎಂದರು. ಅಲ್ಲದೆ, ಆಯ್ದ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ತಿಂಗಳ ಟ್ಯೂಷನ್ ತರಗತಿಗಳನ್ನು ನಡೆಸಿ ಉತ್ತೇಜನ ನೀಡುತ್ತಿರುವುದಾಗಿಯೂ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಉಮೇಶ್, ಕವಿತಾ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.