N.R. Narayana Murthy: ದೇಶದ ಶೇ.60 ಜನರನ್ನು ಬಡತನ ಕಾಡುತ್ತಿದೆ: ಇನ್ಫೋಸಿಸ್ ನಾರಾಯಣ ಮೂರ್ತಿ

N.R. Narayana Murthy: ತುಮಕೂರು ವಿಶ್ವವಿದ್ಯಾನಿಲಯ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಉತ್ತರಿಸಿದ್ದಾರೆ.

N.R. Narayana Murthy
Profile Prabhakara R Jan 25, 2025 5:16 PM

ತುಮಕೂರು: ಖಾಸಗಿ ವಲಯ ಬಡತನವನ್ನು ದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತದ ಜನಸಂಖ್ಯೆಯಲ್ಲಿ ಇಂದಿಗೂ ಶೇ. 60 ರಷ್ಟು ಜನರನ್ನು ಬಡತನ ಕಾಡುತ್ತಿದ್ದು, ಅದನ್ನು ದೂರ ಮಾಡಲು ಸಾಧ್ಯವಾಗಿಲ್ಲ ಎಂದು ಇನ್ಫೋಸಿಸ್ ಸಹಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ (N.R. Narayana Murthy) ತಿಳಿಸಿದರು.

ತುಮಕೂರು ವಿಶ್ವವಿದ್ಯಾನಿಲಯ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊಂಡು, ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದರು.

ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ. ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದು ಹೇಳಿದರು.

ನಾವು ವರ್ತಮಾನದ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ, ನಾಳೆಗೆ ನಮ್ಮನ್ನು ಉತ್ತಮ ಪಡಿಸಿಕೊಳ್ಳುವತ್ತ ಗಮನವಹಿಸಬೇಕು. ಸರ್ಕಾರದ ಕೆಲಸ ಉದ್ಯೋಗವನ್ನು ಸೃಷ್ಟಿ ಮಾಡುವುದರ ಜತೆಗೆ ಉತ್ತಮ ಉದ್ಯೋಗದ ವಾತಾವರಣವನ್ನು ನಿರ್ಮಿಸುವುದು ಸಹ ಆಗಿರುತ್ತದೆ. ಹೂಡಿಕೆದಾರರನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಗೆ ಸಹಕಾರವನ್ನು ನೀಡಬೇಕು. ರಾಜ್ಯದ ತೆರಿಗೆಯನ್ನು ಸಮತೋಲನದಲ್ಲಿ ಇರಿಸಿ ಮೂಲಭೂತ ಸೌಕರ್ಯಗಳನ್ನು ನೀಡುವುದು ಸರ್ಕಾರದ ಕಾರ್ಯ ಆಗಬೇಕು ಎಂದು ವಿಶ್ಲೇಷಿಸಿದರು.

ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಜಪಾನಂದ ಸ್ವಾಮೀಜಿ ಮಾತನಾಡಿ ಇನ್ಫೋಸಿಸ್ ಸಂಸ್ಥೆಯು ಅನೇಕ ಯುವಕರಿಗೆ ಜೀವನವನ್ನು ಕಟ್ಟಿಕೊಟ್ಟಿದೆ. ಯುವಜನತೆ ನಾರಾಯಣಮೂರ್ತಿಯಂತಹ ಮಹನೀಯರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಮೂವತ್ತು ಸಾವಿರಕ್ಕೂ ಹೆಚ್ಚು ಯೋಜನೆಗಳನ್ನು ಇನ್ಫೋಸಿಸ್ ಸಂಸ್ಥೆಯು ನಡೆಸುತ್ತಿದೆ. ತುಮಕೂರು ವಿಶ್ವವಿದ್ಯಾನಿಲಯವು ಸಹ ಇನ್ಫೋಸಿಸ್ ಸಂಸ್ಥೆಯ ಯೋಜನೆಯ ಸದುಪಯೋಗ ಪಡೆದುಕೊಂಡಿದೆ ಎಂದರು.

ನಾರಾಯಣ ಮೂರ್ತಿಯವರು ತಮ್ಮ ಇಳಿ ವಯಸ್ಸಿನಲ್ಲೂ ಸಮಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ. ಅವರ ಶಿಸ್ತು, ಸಮಯ ಪಾಲನೆ, ಸರಳ ವ್ಯಕ್ತಿತ್ವ ಅನುಸರಣೀಯ ಎಂದರು.

ಈ ಸುದ್ದಿಯನ್ನೂ ಓದಿ | 12th BN KSRP Tumkur: ಗಡಿ ಕಾಯೋ ಸೈನಿಕರಷ್ಟೇ ಶಾಂತಿ-ಸುವ್ಯವಸ್ಥೆ ಕಾಪಾಡುವ ಪೊಲೀಸರೂ ಮುಖ್ಯ: ಕಮಾಂಡೆಂಟ್‌ ಹಂಜಾ ಹುಸೇನ್

ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ಪ್ರೇರಣಾ ಉಪನ್ಯಾಸ ಸಮಿತಿ ಅಧ್ಯಕ್ಷ ಪ್ರೊ. ಬಿ. ರವೀಂದ್ರಕುಮಾರ್, ಕೌಶಲ್ಯಾಭಿವೃದ್ಧಿ ಕೇಂದ್ರದ ಸಂಚಾಲಕ ಪ್ರೊ. ಕೆ. ಜಿ. ಪರಶುರಾಮ ಉಪಸ್ಥಿತರಿದ್ದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?