ಅತಿ ಹೆಚ್ಚು ಮಾನವ ದಿನ ಸೃಜನೆಗಾಗಿ ತಾಲ್ಲೂಕು ಮಟ್ಟದ ಅತ್ಯುತ್ತಮ ಪ್ರಶಸ್ತಿ
ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಾಧರಯ್ಯ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆ ಯಡಿ 45000 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಅದಕ್ಕಾಗಿ ಪ್ರಶಸ್ತಿ ಲಭಿಸಿರುವುದು ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಪ್ರೇರೇಪಣೆಯಾಗಿದೆ. ನರೇಗ ಯೋಜನೆ ಗ್ರಾಮೀಣ ಜನರ ಜೀವನಾಡಿಯಾಗಿದ್ದು ಕುಟುಂಬದ ಆರ್ಥಿಕ ಸ್ಥಿರತೆ ಮತ್ತು ಮಹಿಳಾ ಸಬಲೀಕರಣಕ್ಕೂ ಸಹಕಾರಿಯಾಗಿದೆ ಎಂದು ನುಡಿದರು


ಚಿಕ್ಕನಾಯಕನಹಳ್ಳಿ: ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜನೆಗಾಗಿ ತಾಲ್ಲೂಕು ಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆಯಿತು. ತುಮಕೂ ರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಅಭಿವೃದ್ದಿ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಅವರು ಪ್ರಶಸ್ತಿ ಹಾಗು ಪ್ರಮಾಣ ಪತ್ರ ವಿತರಿಸಿದರು.
ಇದನ್ನೂ ಓದಿ: NAREGA: ನರೇಗಾ ಯೋಜನೆಯ ವಿವಿಧ ಕಾಮಗಾರಿಗಳ ವೀಕ್ಷಣೆ: ಉಪಕಾರ್ಯದರ್ಶಿ ಅತೀಕ್ ಪಾಷ
ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಾಧರಯ್ಯ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆ ಯಡಿ 45000 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಅದಕ್ಕಾಗಿ ಪ್ರಶಸ್ತಿ ಲಭಿಸಿರುವುದು ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಪ್ರೇರೇಪಣೆಯಾಗಿದೆ. ನರೇಗ ಯೋಜನೆ ಗ್ರಾಮೀಣ ಜನರ ಜೀವನಾಡಿಯಾಗಿದ್ದು ಕುಟುಂಬದ ಆರ್ಥಿಕ ಸ್ಥಿರತೆ ಮತ್ತು ಮಹಿಳಾ ಸಬಲೀಕರಣಕ್ಕೂ ಸಹಕಾರಿಯಾಗಿದೆ ಎಂದು ನುಡಿದರು. ಕಾರ್ಯದರ್ಶಿ ಕವಿತಾ, ಡಿಇಓ ನವೀನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.